ಮೆರ್ಕ್ ಇಂಡಿಯಾ ಚಾರಿಟೆಬಲ್ ಟ್ರಸ್ಟ್ (ಎಂಐಸಿಟಿ) ಸ್ಕಾಲರ್‌ಶಿಪ್ ಪ್ರೊಗ್ರಾಮ್ 2021–22
ವಿವರ: 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿವರೆಗೆ ಈ ವಿದ್ಯಾರ್ಥಿ ವೇತನ ಅವರಿಗೆ ಸಹಕಾರಿಯಾಗಲಿದೆ.
ಅರ್ಹತೆ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಬೆಂಗಳೂರು, ಮುಂಬೈ, ಥಾಣೆ, ನವಿ ಮುಂಬೈನಲ್ಲಿ ವಾಸಿಸುತ್ತಿರಬೇಕು. 10ನೇ ತರಗತಿಯಲ್ಲಿ ಕನಿಷ್ಠ ಶೇ 80 ರಷ್ಟು ಅಂಕಗಳಿಂದ ಉತ್ತೀರ್ಣಗೊಂಡಿರಬೇಕು. ಕುಟುಂಬದ ತಿಂಗಳ ಆದಾಯವು ₹ 20 ಸಾವಿರಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ವರ್ಷಕ್ಕೆ ₹ 35 ಸಾವಿರ, ಪದವಿ ಮುಗಿಯುವವರೆಗೂ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 4 ಅಕ್ಟೋಬರ್, 2021
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಅರ್ಜಿಗಳು ಮಾತ್ರ
ಹೆಚ್ಚಿನ ಮಾಹಿತಿಗೆ: www.b4s.in/praja/MSP5
ನಿಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಮ್ 2021–22
ವಿವರ: ಪಿಯುಸಿ ಮುಗಿಸಿ, ಫೋಟೋಗ್ರಫಿ ಕೋರ್ಸ್ ಓದಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಆರ್ಥಿಕ ಸಹಾಯ: ₹ 1 ಲಕ್ಷದವರೆಗೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್, 2021
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಅರ್ಜಿಗಳು ಮಾತ್ರ
ಹೆಚ್ಚಿನ ಮಾಹಿತಿಗೆ: www.b4s.in/praja/NSP5
ಕೃಪೆ: buddy4study.com
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.