ಗೋಣಿಕೊಪ್ಪಲು: ‘ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಬೇಕಾದರೆ ಶೈಕ್ಷಣಿಕ ಜ್ಞಾನದ ಜೊತೆಗೆ ಓದು, ಬರಹ ಮತ್ತು ಸಾಮಾನ್ಯ ಜ್ಞಾನದ ಉತ್ತಮ ಕೌಶಲ ಬೆಳೆಸಿಕೊಳ್ಳಬೇಕು’ ಕಾಫಿ ಬೆಳೆಗಾರ ಪುಗ್ಗೇರ ದಿನೇಶ್ ದೇವಯ್ಯ ಹೇಳಿದರು.

ಇಲ್ಲಿನ ಕಾವೇರಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸತತ ಪ್ರಯತ್ನ, ಶ್ರದ್ಧೆ, ತಾಳ್ಮೆ, ಗುರಿ, ಅತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಸಾಧಿಸಲು ಸಾಧ್ಯ. ಪೋಷಕರು ತಮ್ಮ ಮಕ್ಕಳ ಆಸಕ್ತಿಯ ಕ್ಷೆತ್ರದಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕು ಎಂದರು.

ಪಿಎಚ್ಡಿ ಪದವಿ ಪಡೆದ ಸಿ.ಟಿ.ಕಾವ್ಯ, ಟಿ.ಮಾರಣ್ಣ, ಎಚ್.ಎಸ್.ಸಂತೋಷ, ಛಾಯಾಗ್ರಾಹಕ ಎಸ್.ಎಲ್.ಶಿವಣ್ಣ ಅವರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪ್ರಾಂಶುಪಾಲ ಪ್ರೊ.ಎಂ.ಬಿ.ಕಾವೇರಿಯ ಕಾವೇರಿ ವಾರ್ಷಿಕ ವರದಿ ವಾಚಿಸಿದರು. ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪಂಡ ಸುಗುಣ ಮುತ್ತಣ್ಣ ಅಧ್ಯಕ್ಷತೆ ವಹಿಸಿದ್ದರು.

ಐಕ್ಯೂಎಸಿ ಸಂಚಾಲಕಿ ನಯನ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಕೆ.ಕೆ.ಚಿತ್ರಾವತಿ, ಪಿ.ಪಿ.ಸವಿತಾ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಶಾರದ, ಟಿ.ಎನ್.ಅಭಿಷೇಕ್. ಬಿ.ಎನ್.ಆಶಿತ ಚಂಗಪ್ಪ, ಜಿ.ಟಿ.ಡಯಾನ, ಕೆ.ಎಂ.ಲೆವಿನ್, ಎಂ.ಕೆ.ಕೃತಿ, ಕಾವೇರಮ್ಮ ಕೆ.ಎ ಹಾಜರಿದ್ದರು.

ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-51-141427353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.