ಸುಬ್ರಹ್ಮಣ್ಯ: ‘ಹಗ್ಗ–ಜಗ್ಗಾಟ ಸ್ಪರ್ಧೆಗೆ ಶಕ್ತಿ ಪ್ರಧಾನ ಅಲ್ಲ. ಯುಕ್ತಿ ಸೇರಿದರಷ್ಟೇ ಇಲ್ಲಿ ಗೆಲುವು ಸಾಧ್ಯವಿದೆ. ಶಕ್ತಿ ಮತ್ತು ಯುಕ್ತಿ ಮಿಳಿತವಾಗುವ ಸ್ಪರ್ಧೆಯನ್ನು ಅತ್ಯಂತ ಯಶಸ್ಸಿನ ರೀತಿಯಲ್ಲಿ ಇಲ್ಲಿ ಆಯೋಜಿಸಿದ್ದ ಸಂಘಟಕರ ಪ್ರಯತ್ನ ಶ್ಲಾಘನೀಯ’ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಮಂಗಳೂರು ವಿ.ವಿ.ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾದ ಅಂತರ ಕಾಲೇಜು ಪುರುಷರು ಮತ್ತು ಮಹಿಳಾ ವಿಭಾಗದ ಹಗ್ಗ–ಜಗ್ಗಾಟ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಗ್ಗ–ಜಗ್ಗಾಟ ಸ್ಪರ್ಧೆಯೀಗ ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಪಡೆಯುತ್ತಿದೆ. ಕೆಎಸ್ಎಸ್ ಕಾಲೇಜು ಇದನ್ನು ಅರ್ಥಪೂರ್ಣ ರೀತಿಯಲ್ಲಿ ಅನುಷ್ಠಾನಗೊಳಿಸಿದೆ. ಧಾರ್ಮಿಕ ಕೇಂದ್ರದ ಮೂಲಕ ನಡೆಸುವ ಕಾಲೇಜು ಜಿಲ್ಲೆಗೆ ಮಾದರಿಯಾಗುವ ಹಾಗೆ ತನ್ನ ಚಟುವಟಿಕೆಯನ್ನು ಹೊಂದಿರುವುದು ಸಂತಸದ ಸಂಗತಿ ಎಂದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾತನಾಡಿ, ಕಬಡ್ಡಿ, ಲಗೋರಿ, ಹಗ್ಗ–ಜಗ್ಗಾಟಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ. ಈ ಎಲ್ಲ ಆಟಗಳು ಗ್ರಾಮಾಂತರ ಪ್ರದೇಶದ ಪ್ರತಿಭೆಗಳ ಪರಿಶ್ರಮದ ಆಟ. ಕ್ರೀಡೆಯಿಂದ ಸಮಾಜದಲ್ಲಿ ಸಾಮರಸ್ಯ ವಾತಾವರಣ ಮೂಡಿಸಲು ಸಾಧ್ಯವಿದೆ ಎಂದರು.

ಇದೇ ವೇಳೆ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಜೋಸ್ ದಂಪತಿಯನ್ನು ಸಮ್ಮಾನಿಸಲಾಯಿತು.

ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಮಾಧವ ಡಿ., ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಪಿಟಿಎ ಅಧ್ಯಕ್ಷ ರವಿ ಕಕ್ಕೆಪದವು, ಮಂಗಳೂರು ವಿ.ವಿ.ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಐಕ್ಯುಐಸಿ ಸಂಯೋಜಕಿ ಲತಾ ಬಿ.ಟಿ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್, ಕಾಲೇಜಿನ ದೈಹಿಕ ನಿರ್ದೇಶಕ ದಿನೇಶ್ ಪಿ.ಟಿ ಉಪಸ್ಥಿತರಿದ್ದರು.

ಕೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ದಿನೇಶ್ ಸ್ವಾಗತಿಸಿ, ಉಪನ್ಯಾಸಕಿ ಅಶ್ವಿನಿ ವಂದಿಸಿದರು. ವಿನ್ಯಾಸ ಹೊಸಳ್ಳಿಕೆ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-243032293

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.