ಸುಬ್ರಹ್ಮಣ್ಯ: ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಗುಣ ಅಗತ್ಯ. ಕಾಲೇಜಿನಲ್ಲಿ ಲಭಿಸಿದ ಪ್ರೋತ್ಸಾಹ ನನ್ನನ್ನು ನಟನನ್ನಾಗಿ ಮಾಡಿದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಯೊಂದಿಗೆ ಕಲಾ ಪ್ರೌಢಿಮೆಯನ್ನು ಹೊಂದಿರಬೇಕು. ಇದು ಬದುಕಿನ ಉನ್ನತಿಗೆ ಬುನಾದಿಯಾಗುತ್ತದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಸಿನಿಮಾ ನಟ ದೀಕ್ಷಿತ್ ಕುಂತೂರು ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಕೆ.ಎಸ್.ಎಸ್ ಕಾಲೇಜಿನಲ್ಲಿ ಶುಕ್ರವಾರ ನಡೆದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಪ್ರತಿಭಾ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ದಿನೇಶ್ ಪಿ.ಟಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕ ವಿನ್ಯಾಸ್ ಹೊಸೋಳಿಕೆ, ಐಕ್ಯುಎಸಿ ಸಂಯೋಜಕಿ ಲತಾ ಬಿ.ಟಿ., ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ನಾಯಕಿ ಚೈತನ್ಯ ಎನ್.ಎಸ್. ಭಾಗವಹಿಸಿದ್ದರು. ಉಪನ್ಯಾಸಕಿ ಆರತಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಂಘದ ಸದಸ್ಯ ಭರತ್ ವಂದಿಸಿದರು. ಬಳಿಕ ಕಾಲೇಜಿನ ವಿವಿಧ ತರಗತಿಗಳ ನಡುವೆ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-1994139068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.