ಸುಂಟಿಕೊಪ್ಪ: ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮನೋಭಾವನೆಯನ್ನು ಬೆಳಿಸಿಕೊಂಡು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬಂತೆ ಬಾಳಿದರೆ ಮಾತ್ರ ವ್ಯಕ್ತಿಗೆ ಗೌರವ ಸಿಗಲಿದೆ ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ ಹೇಳಿದರು.

ಸುಂಟಿಕೊಪ್ಪ ವರ್ಕ್ಶಾಪ್ ಮಾಲೀಕರ ಸಂಘದ ವತಿಯಿಂದ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಬೆಳ್ಳಿ ಮಹೋತ್ಸವ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.

‘ಸಂಘದ ಕಾರ್ಯಕ್ರಮವು ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಸುಂಟಿಕೊಪ್ಪವು ಸರ್ವ ಭಾಷಿಕರ ನೆಲೆಬೀಡಾಗಿದ್ದು ಸರ್ವ ಜನಾಂಗೀಯ ಶಾಂತಿಯ ತೋಟ ಎಂದು ಹೆಸರು ಪಡೆದಿದೆ. ಯಾವುದೇ ಸಂಘ ಸಂಸ್ಥೆಗಳು ಸಮಾಜಮುಖಿಯಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಾಗ ಜನ ಮಾನಸದಲ್ಲಿ ಶಾಶ್ವತವಾದ ನೆಲೆ ಮತ್ತು ಸ್ಥಾನವನ್ನು ಪಡೆಯುತ್ತವೆ’ ಎಂದರು.

ರಾಜ್ಯ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ ಸುಲ್ತಾನ್ ಮಾತನಾಡಿ, ‘ವರ್ಕ್ಶಾಪ್ ಮಾಲೀಕರ ಸಂಘವು ಸರ್ಕಾರಿ ಶಾಲೆಯ ಮಕ್ಕಳನ್ನು ಸನ್ಮಾನಿಸುವ ಮೂಲಕ ಒಂದು ಅನುಸರಣೆಯ ಮಾದರಿಯನ್ನು ಹುಟ್ಟು ಹಾಕಿದೆ’ ಎಂದು ಶ್ಲಾಘಿಸಿದರು.

ಸಂಘದ ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಸಂಘದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ನೀಡಿದರು.

ಮಾಜಿ ಅಧ್ಯಕ್ಷರಾದ ವಿ.ಎ.ಸಂತೋಷ್, ಪಿ.ಆರ್.ಸುಕುಮಾರ್, ಕೆ.ಪಿ.ವಿನೋದ್ ಮಾತನಾಡಿದರು. ಸಂಘದ ಅಧ್ಯಕ್ಷ ಬಿ.ಎಸ್.ರಮೇಶ್ ಅಧ್ಯಕ್ಷತೆ ವಹಿಸಿದ್ದರು.

ಸುಂಟಿಕೊಪ್ಪ ಸರ್ಕಾರಿ ಸರ್ಕಾರಿ ಪ್ರೌಢಶಾಲೆಯು ಶೇ 100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ ಮತ್ತು ಶಿಕ್ಷಕಿ ಲಿಯೋನಾ ಸಭಾಸ್ಟಿನ್, ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಮೊದಲ 10 ಮಂದಿ ವಿದ್ಯಾರ್ಥಿಗಳನ್ನು ಹಾಗೂ ಸಂಘದ ಸದಸ್ಯ ಸೋಮಣ್ಣ, ಪತ್ರಕರ್ತ ಬಿ.ಸಿ.ದಿನೇಶ್ ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-295924412

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.