ಸುರಹೊನ್ನೆ (ನ್ಯಾಮತಿ): ‘ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಹಣಕಾಸಿನ ವ್ಯವಹಾರ ಜ್ಞಾನವನ್ನು ಕಲಿಸುವ ಉದ್ದೇಶದಿಂದ ಆರ್ಥಿಕ ಸಾಕ್ಷರತಾ ಶಿಕ್ಷಣ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಶಾಲೆಯ ಮುಖ್ಯಶಿಕ್ಷಕ ಡಿ.ರಾಮಪ್ಪ ತಿಳಿಸಿದರು.

ಮಂಗಳವಾರ ಸುರಹೊನ್ನೆ ಗ್ರಾಮದ ಪಿ.ಎಂ.ಶ್ರೀ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳನ್ನು ನ್ಯಾಮತಿಯ ವಿವಿಧ ಬ್ಯಾಂಕ್ಗಳಿಗೆ ಕರೆದುಕೊಂಡು ಹೋಗಿ ಹಣಕಾಸಿನ ವಹಿವಾಟು ಹೇಗೆ ನಡೆಯುತ್ತದೆ ಎಂಬ ಬಗ್ಗೆ ಅರಿವು ಮೂಡಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಪೋಷಕರಿಗೆ ಶಾಲೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮರಿಗೌಡ, ಉಪಾಧ್ಯಕ್ಷೆ ಆಶಾ, ಸುರಹೊನ್ನೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜ, ಶಾಲೆಯ ಸಹಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-43-958921844

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.