ಸುರಪುರ: ‘ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಪುಸ್ತಕವನ್ನು ಅಭ್ಯಾಸ ಮಾಡಿಸದೇ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಅವರ ಮನಸ್ಸನ್ನು ಅಭ್ಯಾಸದ ಕಡೆಗೆ ತಿರುಗಿಸಬೇಕು’ ಎಂದು ಮುಖ್ಯಶಿಕ್ಷಕ ಎ.ಬಿ. ಪಾಟೀಲ ಹೇಳಿದರು.

ಹಸನಾಪುರದ ಶರಣಬಸವ ವಸತಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಲ್ಲಿ ವಿದ್ಯೆಯ ಜೊತೆಗೆ ವಿನಯವಂತಿಕೆ, ಪಾಲಕರಿಗೆ, ಹಿರಿಯರಿಗೆ ಹಾಗೂ ಶಿಕ್ಷಕರಿಗೆ ಗೌರವ ನೀಡುವುದನ್ನು ಕಲಿಸಿಕೊಡಬೇಕು. ಇದು ಅವರ ಜೀವನವನ್ನು ಇನ್ನಷ್ಟು ಉಜ್ವಲಗೊಳಿಸುತ್ತದೆ’ ಎಂದರು.

ನಿವೃತ್ತ ಡಯಟ್ ಉಪನ್ಯಾಸಕ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಓರಿಯೆಂಟೆಶನ್ ಶಿಬಿರದಲ್ಲಿ ನಡೆಸಿದ ಪಠ್ಯ, ಪಠ್ಯೇತರ, ಹಾಗೂ ಯೋಗ ತರಗತಿಗಳ ಮಹತ್ವ ತಿಳಿಸಿ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಇದ್ದಲ್ಲಿ ಮಾತ್ರ ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಸಂಸ್ಥೆಯ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ರೇವಪ್ಪ ಪಾಟೀಲ, ಬಸವರಾಜ ಢವಳಗಿ ಉಪಸ್ಥಿತರಿದ್ದರು.

ಓಂಕಾರೇಶ್ವರಿ ನಿರೂಪಿಸಿ, ವಂದಿಸಿದರು. ದೀಪಶ್ರೀ ಮತ್ತು ಸಂಜನಾ ಪ್ರಾರ್ಥನಾ ಗೀತೆಯನ್ನು ಹಾಡಿದರು. ವಿಶ್ವಪೂರ್ವ ಮತ್ತು ಶಿಲ್ಪಾ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಶಿಬಿರಕ್ಕೆ ಹಾಜರಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಅಭಿನಂದನಾ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಶಿಬಿರದಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಯೋಗಾಸನದ ತರಬೇತಿ ಮತ್ತು ವಿವಿಧ ಕ್ರೀಡೆಗಳ ತರಬೇತಿ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-30-271248845

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.