ಸುರಪುರ: ‘ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಾಥಮಿಕ ಹಂತದ ಶಿಕ್ಷಣ ಭದ್ರ ಬುನಾದಿ. ಕಾರಣ ಮಕ್ಕಳು ಚೆನ್ನಾಗಿ ಓದಬೇಕು’ ಎಂದು ವಕೀಲೆ ಜಯಲಲಿತಾ ಪಾಟೀಲ ಹೇಳಿದರು.

ನಗರದ ಖುರೇಶಿ ಮೋಹಲ್ಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 7ನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಲಾ ಕಿರುಹೊತ್ತಿಗೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಶಾಲೆಯಲ್ಲಿ ಶಿಕ್ಷಕರು ಹೇಳಿ ಕೊಟ್ಟದ್ದನ್ನು ಚೆನ್ನಾಗಿ ಕಲಿಯಬೇಕು. ಪಠ್ಯ ಪುಸ್ತಕದ ಅಭ್ಯಾಸದೊಂದಿಗೆ ಉತ್ತಮ ಪುಸ್ತಕಗಳನ್ನು ಓದಬೇಕು. ಗುರು ಹಿರಿಯರನ್ನು, ತಂದೆ ತಾಯಿಯರನ್ನು ಗೌರವಿಸಬೇಕು’ ಎಂದು ಕರೆ ನೀಡಿದರು.

‘ಉನ್ನತವಾದ ಗುರಿ ಇಟ್ಟುಕೊಳ್ಳಬೇಕು. ಆಟದೊಂದಿಗೆ ಓದಿನ ಕಡೆ ಗಮನಕೊಡಬೇಕು. ಮೊಬೈಲ್ದಿಂದ ದೂರವಿದ್ದು ಅಭ್ಯಾಸದಲ್ಲಿ ಮಗ್ನರಾಗಬೇಕು. ನಿಮ್ಮೆಲ್ಲರ ಭವಿಷ್ಯ ಉತ್ತಮವಾಗಲಿ’ ಎಂದು ಹಾರೈಸಿದರು.

ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸೋಮರೆಡ್ಡಿ ಮಂಗ್ಯಾಳ ಮಾತನಾಡಿ, ‘ಸರ್ಕಾರಿ ಶಾಲೆ ಅಂದರೆ ಬಡವರ ಶಾಲೆ. ಸರ್ಕಾರ ಸಮವಸ್ತ್ರ, ಪಠ್ಯ ಪುಸ್ತಕ, ಶೂ, ಸಾಕ್ಸ್, ಬಿಸಿಯೂಟ, ಪೌಷ್ಠಿಕ ಆಹಾರ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕೊಡುತ್ತಿದೆ. ಮಕ್ಕಳು ಇವುಗಳನ್ನು ಬಳಸಿಕೊಂಡು ಚೆನ್ನಾಗಿ ಓದಬೇಕು’ ಎಂದು ಕಿವಿಮಾತು ಹೇಳಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ತರಗತಿ ರತ್ನ’ ಮತ್ತು ‘ಶಾಲಾ ರತ್ನ’ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಮುಖ್ಯಶಿಕ್ಷಕ ಸಾಮವೆಲ್ ಮ್ಯಾಥ್ಯೂ ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಶಿವಕುಮಾರ ಹಿರೇಮಠ, ಎಸ್ಡಿಎಂಸಿ ಅಧ್ಯಕ್ಷ ನಾಗಪ್ಪ ರಾಯಚೂರಕರ್ಸಿತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-30-672007575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.