ಸುರಪುರ: ‘ಕನಕದಾಸರು ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ಧತಿ, ಮೂಢನಂಬಿಕೆ, ಅಸ್ಪೃಶ್ಯತೆ ಹೋಗಲಾಡಿಸಲು ತಮ್ಮ ಸಾಹಿತ್ಯದ ಮೂಲಕ ಅವಿರತವಾಗಿ ಶ್ರಮಿಸಿದ ಶ್ರೇಷ್ಠ ಸಂತರು’ ಎಂದು ಜಾಲಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ದೇವು ಹೆಬ್ಬಾಳ ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬುಧವಾರ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸಗರದ ಕಲಾನಿಕೇತನ ಟ್ರಸ್ಟ್ ಆಯೋಜಿಸಿದ್ದ ಸಂತ ಕವಿ ಕನಕದಾಸರ ಕುರಿತು ‘ಕನಕ ದರ್ಶನ ವಿಶೇಷ ಉಪನ್ಯಾಸ ಮಾಲಿಕೆ’ಯಲ್ಲಿ ಅವರು ಮಾತನಾಡಿದರು.

‘ಕನಕದಾಸರ ವೈಚಾರಿಕತೆ, ಚಿಂತನೆ ಅವರ ಮೌಲ್ಯಯುತ ಬದುಕು ಇಂದಿನ ಯುವ ಸಮೂಹಕ್ಕೆ ಮತ್ತಷ್ಟು ಪರಿಚಯಿಸುವ ಕೆಲಸವನ್ನು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ’ ಎಂದರು.

ಸಾಹಿತಿ ಶರಣಗೌಡ ಪಾಟೀಲ ಜೈನಾಪುರ ಮಾತನಾಡಿ, ‘ರಾಜ ವೈಭೋಗದಲ್ಲಿದ್ದ ಕನಕದಾಸರು ಎಲ್ಲವನ್ನು ತ್ಯಾಗ ಮಾಡಿ ಸಮಾಜಕ್ಕಾಗಿ ಹಗಲಿರುಳು ಶ್ರಮಿಸಿದರು. ಅವರ ಸಾಹಿತ್ಯ ಶ್ರೇಷ್ಠ ಮಟ್ಟದ್ದು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದು ಎಲ್ಲರು ಆದರ್ಶ ಬದುಕು ಕಟ್ಟಿಕೊಳ್ಳಬೇಕು’ ಎಂದು ಹೇಳಿದರು.

ಉಪನ್ಯಾಸಕ ಎಚ್.ಎಂ ವಗ್ಗಾ, ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಜಗದೀಶಕುಮಾರ ಮಾತನಾಡಿದರು. ಕಲಾನಿಕೇತನ ಟ್ರಸ್ಟ್ ಅಧ್ಯಕ್ಷ ಬಸವರಾಜ ಸಿನ್ನೂರ ಪ್ರಾಸ್ತವಿಕವಾಗಿ ಮಾತನಾಡಿದರು.

ಬಿಆರ್ಸಿ ರಾಜಶೇಖರ ದೇಸಾಯಿ, ಪಿ.ಕೆ.ಕುಲಕರ್ಣಿ, ಹನುಮಂತರಾಯ ದೊಡ್ಮನಿ, ಮಹಾದೇವಪ್ಪ, ಮಾರುತಿ, ಪ್ರಭುಗೌಡ ಪಾಟೀಲ ವೇದಿಕೆಯಲ್ಲಿದ್ದರು. ಶಾಂತು ನಾಯಕ ಸ್ವಾಗತಿಸಿದರು. ಹನುಮಂತ ಸಿಂಘೆ ನಿರೂಪಿಸಿದರು. ಬಸವರಾಜ ಪೂಜಾರಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-30-832119423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.