ಸುರಪುರ: ‘ಕನ್ನಡ ಸಾಹಿತ್ಯ ಪರಿಷತ್ತು ನಾಡಿನಾದ್ಯಂತ ಸಾಹಿತ್ಯ, ಸಂಸ್ಕೃತಿಯನ್ನು ಪಸರಿಸುವ ಮೂಲಕ ಕನ್ನಡಿಗರ ಮನೆ ಮಾತಾಗಿದೆ’ ಎಂದು ಕೆವೈಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ ಸಜ್ಜನ್ ಹೇಳಿದರು.

ಇಲ್ಲಿಯ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ಕಸಾಪ ಕನ್ನಡಿಗರ ಹೆಮ್ಮೆಯ ಸಂಸ್ಕೃತಿ, ಕನ್ನಡ ಸಾಹಿತ್ಯದ ಪರಂಪರೆಯ ಸಾರ. ಕನ್ನಡ ಸಾಹಿತ್ಯವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಜೀವನ ಮೌಲ್ಯಗಳನ್ನು ಪ್ರತಿಬಿಂಬಿಸುವ ಶಕ್ತಿಯಾಗಿದೆ’ ಎಂದು ತಿಳಿಸಿದರು.

‘ಯುವ ಪೀಳಿಗೆ ಕನ್ನಡ ಸಾಹಿತ್ಯದತ್ತ ಹೆಚ್ಚು ಆಸಕ್ತಿ ತೋರಬೇಕು. ಕನ್ನಡ ಭಾಷೆ ಮತ್ತು ಸಾಹಿತ್ಯದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಕರೆ ನೀಡಿದರು.

ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಅರವಿಂದಕುಮಾರ ಮಾತನಾಡಿ, ‘ಕಸಾಪ ಸಾಹಿತಿಗಳನ್ನು ಪ್ರೋತ್ಸಾಹಿಸುವ ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಕನ್ನಡ ಅಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಅಧ್ಯಕ್ಷ ಶರಣಬಸಪ್ಪ ಯಾಳವಾರ ಮಾತನಾಡಿ, ‘ಕನ್ನಡ ಭಾಷೆಯು 2000 ವರ್ಷಗಳಿಗಿಂತಲೂ ಹೆಚ್ಚಿನ ಇತಿಹಾಸ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ’ ಎಂದರು.

ಸಾಹಿತಿ ಕನಕಪ್ಪ ವಾಗನಗೇರಿ ಅವರು ಕಸಾಪ ಸಂಸ್ಥಾಪನಾ ದಿನಾಚರಣೆಯ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಪ್ರಮುಖರಾದ ರಾಮನಗೌಡ ಸುಬೇದಾರ್, ರಾಘವೇಂದ್ರ ಬಾಡಿಯಾಳ, ಯಲ್ಲಪ್ಪ ಹುಲಿಕಲ್, ಪ್ರಕಾಶ ಅಲಬನೂರ, ರಜಾಕ್ ಬಾಗವಾನ್, ಜಾವೇದ್ ಹುಸೇನ್ ಹವಲ್ದಾರ್, ಅನ್ವರ್ ಜಮಾದಾರ್, ರಾಘವೇಂದ್ರ ಭಕ್ರಿ, ಶರಣಬಸವ ಹೂಗಾರ ಸೇರಿ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.

ಶ್ರೀಶೈಲ ಯಂಕಂಚಿ ಸ್ವಾಗತಿಸಿದರು. ವೆಂಕಟೇಶ ಪಾಟೀಲ ನಿರೂಪಿಸಿದರು. ಸಾಹೇಬರೆಡ್ಡಿ ಇಟಗಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-2005025110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.