ಸುರಪುರ: ‘ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಚೆನ್ನಾಗಿ ಓದಬೇಕು. ಈಗ ಕಷ್ಟಪಟ್ಟು ಓದಿ ಉತ್ತಮ ಅಂಕ ಪಡೆದರೆ ಭವಿಷ್ಯದಲ್ಲಿ ನೀವು ನೆಮ್ಮದಿಯ ಜೀವನ ನಡೆಸಬಹುದು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.

ತಮ್ಮ ಕಚೇರಿಯಲ್ಲಿ ಶನಿವಾರ ಸುರಪುರದ ಶರಣಬಸವ ವಸತಿ ಶಾಲೆ ಮತ್ತು ಶರಣಬಸವ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ಈ ಬಾರಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಜಿಲ್ಲೆಗೆ ಉತ್ತಮ ಎನ್ನಬಹುದಾದ ಫಲಿತಾಂಶ ಬಂದಿದೆ. ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಿದರೆ ಯುಪಿಎಸ್ಸಿ ಪರೀಕ್ಷೆಯಲ್ಲೂ ಯಶಸ್ಸು ಸಾಧಿಸಬಹುದು. ಜಿಲ್ಲೆಯ 4 ಜನ ಈ ಬಾರಿ ಯುಪಿಎಸ್ಸಿ ಪಾಸ್ ಮಾಡಿದ್ದು ಇದಕ್ಕೆ ನಿದರ್ಶನ’ ಎಂದರು.

ಎಸ್ಎಸ್ಎಲ್ಸಿಯಲ್ಲಿ ತಾಲ್ಲೂಕಿಗೆ ಟಾಪರ್ ಆಗಿರುವ ಸಮರ್ಥ ಮನೀಶಕುಮಾರ, ಮೋನಿಕಾ ಗಣೇಶ ಮತ್ತು ಪಿಯು ವಿಜ್ಞಾನದಲ್ಲಿ ಉತ್ತಮ ಅಂಕ ಪಡೆದಿರುವ ಶ್ವೇತಾ ಹನುಮಂತ, ವಾಣಿಜ್ಯ ವಿಭಾಗದ ಸೌಮ್ಯ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ, ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ಶರಣಬಸಪ್ಪ ಸಾಲಿ, ನಾನಾಗೌಡ ದೇಸಾಯಿ, ವಿವೇಕ ಗಂಜಿ, ರೇವಪ್ಪ ಪಾಟೀಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-30-1363134234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.