ಸುರಪುರ: ‘ವಿಶ್ವದ ಮಾರಣಾಂತಿಕ ರೋಗ ಎಂದು ಪರಿಗಣಿಸಲಾಗಿದ್ದ ಟಿ.ಬಿ. ಈಗ ಗುಣಪಡಿಸಬಹುದಾದದ ಕಾಯಿಲೆಯಾಗಿದೆ. ಆರಂಭಿಕ ಹಂತದಲ್ಲೆ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆದು ಟಿ.ಬಿ. ಯಿಂದ ಸಂಪೂರ್ಣ ಮುಕ್ತರಾಗಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪನಾಯಕ ಹೇಳಿದರು.

ನಗರದ ನಮ್ಮ ಕ್ಲಿನಿಕ್ನಲ್ಲಿ ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಟಿ.ಬಿ. ಹೆಚ್ಚಾಗಿ ಕಾರ್ಮಿಕರಲ್ಲಿ ಕಂಡು ಬರುತ್ತದೆ. ಈ ರೋಗದ ಬಗ್ಗೆ ಭಯ ಬೇಡ ಎಚ್ಚರವಿರಲಿ. ರೋಗದ ಲಕ್ಷಣಗಳಾದ ತೂಕ ಇಳಿಕೆ, ಕಫದಲ್ಲಿ ರಕ್ತಸ್ರಾವ, ರಾತ್ರಿ ಸಮಯ ಜ್ವರ ಬರುವುದು, ಎರಡು ವಾರಕ್ಕಿಂತ ಹೆಚ್ಚು ಕೆಮ್ಮು ಕಂಡುಬಂದರೆ ತಕ್ಷಣ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ರಕ್ತದೊತ್ತಡ, ಮಧುಮೇಹ, ಎಚ್ಐವಿ ಬಗ್ಗೆ ಮಾಹಿತಿ ನೀಡಿದ ಅವರು, ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಿರಿ. ಅಲ್ಲಿಯೇ ಹೆರಿಗೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿ, ಆರೋಗ್ಯ ಇಲಾಖೆಯ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ’ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಹಚ್ಚಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಹ್ಮದ್ ಸಲೀಮ, ವೈದ್ಯರಾದ ಹರ್ಷವರ್ಧನ್ ರಫುಗಾರ, ಚಂದ್ರಶೇಖರ, ಬಾಬಾ ಪಟೇಲ್, ಸಿಬ್ಬಂದಿಯಾದ ಹಣಮಂತ ಅನವಾರ, ರಾಘವೇಂದ್ರನಾಯಕ, ಚಿದಾನಂದ, ಶಮೀಮ, ಪ್ರದೀಪ, ಶ್ರೀಕಾಂತಯ್ಯ, ವೆಂಕಟೇಶ, ಚೇತನ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ನೂರಾರು ರೋಗಿಗಳಿಗೆ ಮತ್ತು ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಔಷಧ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-30-372530745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.