ಸುರಪುರ: ‘ವಿದ್ಯಾರ್ಥಿಗಳು ಮತ್ತು ಯುವ ಜನರು ಸಾಹಿತ್ಯಿಕ ಪುಸ್ತಕಗಳನ್ನು ಅಧ್ಯಯನ ಮಾಡಬೇಕು’ ಎಂದು ಕಡ್ಪೆಪ್ಪನವರ ನಿಷ್ಠಿ ವಿರಕ್ತ ಮಠದ ಪ್ರಭುಲಿಂಗ ಸ್ವಾಮೀಜಿ ಹೇಳಿದರು.

ನಗರದ ಕಡ್ಲಪ್ಪನವರ ನಿಷ್ಠಿ ಮಠದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಜಾಗೃತ ಸಮಿತಿ ಯಾದಗಿರಿ ವತಿಯಿಂದ ಹಮ್ಮಿಕೊಂಡಿದ್ದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಗ್ರಂಥಾಲಯ ಉದ್ಘಾಟಿಸಿದ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಮಾತನಾಡಿ, ‘ಪ್ರತಿಯೊಬ್ಬರು ಮನೆಯಲ್ಲಿ ಗ್ರಂಥಾಲಯಕ್ಕೆ ಒಂದು ಕೋಣೆಯನ್ನು ಮೀಸಲಿರಿಸಬೇಕು. ಅಡುಗೆ ಕೋಣೆ, ದೇವರ ಕೋಣೆಯಂತೆ ಪುಸ್ತಕ ಕೋಣೆ ಆಗಬೇಕು. ಅಂದಾಗ ಮಾತ್ರ ಪುಸ್ತಕ ಸಂಸ್ಕೃತಿ ಬೆಳೆಯಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಮನೆಗೊಂದು ಗ್ರಂಥಾಲಯ ಜಿಲ್ಲಾ ಜಾಗೃತಿ ಸಮಿತಿ ಸಂಚಾಲಕ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ‘ಸುರಪುರ ತಾಲ್ಲೂಕಿನ ಒಟ್ಟ್ಟು 15 ಮನೆಗಳಲ್ಲಿ ಮನೆಗೊಂದು ಗ್ರಂಥಾಲಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬರುವ ದಿನಗಳಲ್ಲಿ ಶಿಕ್ಷಕರು, ಜನಪ್ರತಿನಿಧಿಗಳು, ಪತ್ರಕರ್ತರು, ಗಣ್ಯರ ನಿವಾಸಗಳಲ್ಲಿಯೂ ಗ್ರಂಥಾಲಯಗಳನ್ನು ಪ್ರಾರಂಭಿಸುವ ಯೋಜನೆ ಹೊಂದಿದ್ದೇವೆ’ ಎಂದು ಹೇಳಿದರು.

ಕೆವೈಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ ಸಜ್ಜನ್ ಮಾತನಾಡಿ, ‘ಮಠದ ಪೂಜ್ಯರು ಸಾವಿರಾರು ಪುಸ್ತಕಗಳನ್ನು ಸಂಗ್ರಹಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ’ ಎಂದರು.

ಕಸಾಪ ಅಧ್ಯಕ್ಷ ಶರಣಬಸಪ್ಪ ಯಾಳವಾರ, ಪ್ರಮುಖರಾದ ಶರಣಯ್ಯಸ್ವಾಮಿ ಮಠಪತಿ, ಸಿದ್ದಲಿಂಗಯ್ಯಸ್ವಾಮಿ ಕಡ್ಲಪ್ಪಮಠ, ಮಲ್ಲಿಕಾರ್ಜುನ ಜಾಲಹಳ್ಳಿ, ಶರಣಪ್ಪ ಹಳ್ಳದ, ಶಿವಶರಣಬಸವ ಪುರಾಣಿಕಮಠ, ಸಜ್ಜನಕುಮಾರ ಕಲ್ಯಾಣಶೆಟ್ಟಿ, ಶ್ರೀಶೈಲ ನಿಂಬಾಳ, ಎಚ್.ರಾಠೋಡ್, ವೆಂಕಟೇಶ ಪಾಟೀಲ, ಮಹಾಂತೇಶ ಗೋನಾಲ, ಜಾವೇದ್ ಹುಸೇನ್ ಹವಲ್ದಾರ್, ಶ್ರೀಶೈಲ ಯಂಕಂಚಿ, ರಾಘವೇಂದ್ರ ಭಕ್ರಿ, ಮಹೇಶ ಹಳ್ಳದ, ಲಂಕೇಶ ದೇವತ್ಕಲ್, ಭೀಮಣ್ಣ ದೊರೆ ಉಪಸ್ಥಿತರಿದ್ದರು.

ಜಿಲ್ಲಾ ಗ್ರಂಥಾಲಯ ಸಮಿತಿ ಸದಸ್ಯ ಕನಕಪ್ಪ ವಾಗಣಗೇರಾ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವು ಹೆಬ್ಬಾಳ ನಿರೂಪಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-30-153173914

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.