ತಿ.ನರಸೀಪುರ: ನೀಟ್ ಪರೀಕ್ಷೆಯನ್ನು ರಾಜ್ಯಮಟ್ಟದಲ್ಲಿ ನಡೆಸಲು ಅವಕಾಶ ನೀಡಬೇಕು ಎಂದು ದಸಂಸ ಬಣರಹಿತ ಸಮಿತಿಯ ಜಿಲ್ಲಾ ಸಂಚಾಲಕ ಸಿ. ಉಮಾ ಮಹದೇವ್ ಒತ್ತಾಯಿಸಿದ್ದಾರೆ.

‘ಹಿಂದಿನ ದಶಕಗಳಲ್ಲಿ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯ ಮೂಲಕ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶವಿತ್ತು. ಆ ವೇಳೆ ರಾಜ್ಯದ ಪ್ರತಿಭಾವಂತ, ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ದೊರಕುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯನ್ನು ಆ ಮಟ್ಟದಲ್ಲಿ ಗ್ರಾಮೀಣ ಮಕ್ಕಳು ಎದುರಿಸುವುದು ಬಹಳ ಕಷ್ಟವಾಗುತ್ತಿದೆ. ರಾಷ್ಟ್ರಮಟ್ಟದ ಪರೀಕ್ಷೆಗೆ ಪೂರಕ ತರಬೇತಿ ಮಧ್ಯಮ ಹಾಗೂ ಬಡ ಕುಟುಂಬದವರಿಗೆ ಸಿಗುವುದು ಬಹಳ ಕಷ್ಟವಾಗಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಸ್ಥಿತಿವಂತರು ಅನುಕೂಲಸ್ಥರು ಲಕ್ಷಾಂತರ ರೂಪಾಯಿ ಪಾವತಿಸಿ ನೀಟ್ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ಕೊಡಿಸುತ್ತಾರೆ. ಪ್ರಶ್ನೆಗಳು ಲೀಕ್ ಆಗಿರುವ ಹಿಂದೆ ಇಂತಹ ಸಂಸ್ಥೆಗಳ ಕೈವಾಡವಿದೆಯೇ ಎಂಬ ಶಂಕೆ ಮೂಡುತ್ತದೆ. ಕೆಲವು ಅಕ್ರಮಗಳ ಮೂಲಕ ಕೆಲವರಿಗೆ ಮಾತ್ರ ಅವಕಾಶವಾಗುತ್ತಿದೆ. ಸ್ಥಳೀಯ ವಿದ್ಯಾರ್ಥಿಗಳಿಗೆಅವಕಾಶ ಸಿಗುತ್ತಿಲ್ಲ. ಹಿಂದಿನ ಸಿಇಟಿ ಮಾದರಿಯಲ್ಲಿ ರಾಜ್ಯಮಟ್ಟದಲ್ಲಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-38-1911051848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.