ತಿ.ನರಸೀಪುರ: ಶಿಕ್ಷಕರ ಸಮಸ್ಯೆಗಳಿಗೆ ಅದಾಲತ್ ಮಾದರಿಯಲ್ಲಿ ಬಗೆಹರಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ. ಶಿವಶಂಕರಮೂರ್ತಿ ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಬಗೆಹರಿಸಿಕೊಳ್ಳುವುದರ ಜತೆಗೆ ಶಾಲೆಗಳ ಪ್ರಗತಿಗೂ ಆದ್ಯತೆ ನೀಡಬೇಕು. ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ಶಿವಮೂರ್ತಿ, ಖಾಸಗಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡೆಯಲು ಸಾರ್ವಜನಿಕ ಸಹಭಾಗಿತ್ವ ಪಡೆಯಬೇಕಿದೆ. ಶಿಕ್ಷಕರ ಸಂಘವು ಅಗತ್ಯ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು. ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜತೆಗೆ ಇಲಾಖೆಯೊಂದಿಗೂ ಸಹಕರಿಸುವಂತೆ ಅವರು ಸಲಹೆ ಮಾಡಿದರು. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಹಾಗೂ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರ ಸಂಘ ಆದ್ಯತೆ ನೀಡಬೇಕು ಎಂದರು. ಉತ್ತಮ ಸೇವಾ ಚಟುವಟಿಕೆಗಳ ಮೂಲಕ ಕಾರ್ಯ ನಿರ್ವಹಿಸುವಂತೆ ಪದಾಧಿಕಾರಿಗಳಿಗೆ ತಿಳಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಎ.ಗಜೇಂದ್ರ, ಪ್ರಧಾನ ಕಾರ್ಯದರ್ಶಿ ಎನ್. ರೇವಣ್ಣ, ಖಜಾಂಚಿ ಜಿ ಸಿದ್ದಮಲ್ಲಪ್ಪ, ಉಪಾಧ್ಯಕ್ಷ ಸಿ. ಮಹದೇವಸ್ವಾಮಿ, ಅಕ್ಕಮಹಾದೇವಿ, ಸಹ ಕಾರ್ಯದರ್ಶಿ ಸಿ. ಕಿಕ್ಕೇರಿ ಶೆಟ್ಟಿ, ಎಸ್. ನಂದಿನಿ, ಸಂಘಟನಾ ಕಾರ್ಯದರ್ಶಿ ಸಿ. ಸುರೇಶ, ಎಂ. ವೈ. ಜೀನತ್ ಅವರನ್ನು ಅಭಿನಂದಿಸಲಾಯಿತು.

ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನಾಗೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸೋಸ್ಲೆ ನಾಗೇಶ್, ಬಿಆರ್ ಪಿ ಕೆ.ಪಿ. ಮಹಾದೇವಸ್ವಾಮಿ, ನಿಕಟ ಪೂರ್ವ ಅಧ್ಯಕ್ಷ ಸುಬ್ಬಣ್ಣ, ನಿರ್ದೇಶಕರಾದ ಸುಬ್ರಮಣ್ಯ , ಚಂದ್ರಕಲಾ, ಕುಪ್ಯ ಪುಟ್ಟಸ್ವಾಮಿ, ಶ್ರೀಧರ್ ಉತ್ತಂಬಳ್ಳಿ ನಾಗರಾಜು ಬಿಲಿಗೆರೆಹುಂಡಿ ಸಿದ್ದರಾಜು, ಚುನಾವಣಾಧಿಕಾರಿ ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-38-1489580947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.