ತಾಳಿಕೋಟೆ: ‘ಉತ್ತಮ ಹಾಗೂ ಉನ್ನತ ಶಿಕ್ಷಣದ ಜೊತೆಗೆ ಉನ್ನತ ವ್ಯಕ್ತಿತ್ವ ಹೊಂದಿವರಿಗೆ ಮಾತ್ರ ಸಮಾಜದಲ್ಲಿ ಗೌರವ, ಸ್ಥಾನಮಾನಗಳು ದೊರೆಯುತ್ತವೆ. ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟು, ಆಸಕ್ತಿಯಿಂದ ಓದಿ ಗುರಿ ತಲುಪಬೇಕು’ ಎಂದು ಜಮಖಂಡಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ಕೇಂದ್ರದ ಸಂಯೋಜಕ ಯಶವಂತ ಕೊಕ್ಕನವರ ಹೇಳಿದರು.

ಪಟ್ಟಣದ ವಿರಕ್ತಶ್ರೀ ಸಭಾಭವನದಲ್ಲಿ ಮಂಗಳವಾರ ನಡೆದ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀ ಖಾಸ್ಗತೇಶ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ 2025–26ನೇ ಸಾಲಿನ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮುಕ್ತಾಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.

ರಾಚಾರ್ಯ ಡಿ.ಬಿ ಮೂಗಡ್ಲಿಮಠ ಮಾತನಾಡಿ, ‘ವಿದ್ಯಾರ್ಥಿಗಳು ಗುರಿ, ಸಮಯಪ್ರಜ್ಞೆ, ದೃಢಸಂಕಲ್ಪದಿಂದ ಬದುಕು ಕಟ್ಟಿಕೊಳ್ಳಬೇಕು. ಉನ್ನತ ಶಿಕ್ಷಣದಿಂದ ಉದ್ಯೋಗ ಪಡೆದು ಜೀವನ ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ವೀರಶೈವ ವಿದ್ಯಾವರ್ಧಕ ಸಂಘದ ಹಾಗೂ ಮಹಾವಿದ್ಯಾಲಯದ ಚೇರಮನ್ ವಿ.ಸಿ. ಹಿರೇಮಠ ಮಾತನಾಡಿ, ‘ಮಕ್ಕಳು ತಮ್ಮ ಉಜ್ವಲ ಭವಿಷ್ಯಕ್ಕೆ ಸದಾ ಅಧ್ಯಯನ ನಿರತರಾಗಬೇಕು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ನಮ್ಮ ಮಹಾವಿದ್ಯಾಲಯ ಕಳೆದ 49 ವರ್ಷಗಳಿಂದ ಶ್ರಮಿಸುತ್ತಿದೆ. ನಮ್ಮ ಮಹಾವಿದ್ಯಾಲಯಕ್ಕೆ 50 ವರ್ಷಗಳು ತುಂಬುವ ಸಂಭ್ರಮಾಚರಣೆಯಲ್ಲಿ ಇದ್ದೇವೆ’ ಎಂದರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಂ. ಎಸ್. ಸರಶೆಟ್ಟಿ, ಉಪಾಧ್ಯಕ್ಷ ಕೆ. ಎಸ್. ಮುರಾಳ, ಉಪನ್ಯಾಸಕಿಯರಾದ ಸುಜಾತಾ ಚಲವಾದಿ, ದೀಪಾ ಮಾಳಗೆ, ಸಂಗೀತಾ ಕೊಡೆಕಲ್ಲಮಠ, ಲಲಿತಾ ಗೌಡರ, ವಿದ್ಯಾರ್ಥಿನಿ ಮಮತಾಜ ನಾಯ್ಕೋಡಿ, ಸಂಚಾಲಕ ಅಶೋಕ ಆರ್ ರಾಠೋಡ, ಕೆ. ಬಿ. ದೇಸಾಯಿ ವಿದ್ಯಾರ್ಥಿ ಪ್ರತಿನಿಧಿ ವಿದ್ಯಾಶ್ರೀ ಅಗಸರ, ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-1911460588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.