ತರೀಕೆರೆ: ಪಟ್ಟಣದ ಎಸ್ಜೆಎಂ ಪ್ರಥಮ ದರ್ಜೆ ಕಾಲೇಜಿನ ಗುರುಗಳು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದ್ದಾರೆ ಎಂದುಕಾಲೇಜಿನ ಹಳೆಯ ವಿದ್ಯಾರ್ಥಿ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಪಟ್ಟಣದ ಎಸ್ಜೆಎಂ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಮಿತಿಯಿಂದ ಕಾಲೇಜಿನಲ್ಲಿ ನಡೆದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀವನದಲ್ಲಿ ಹೇಗೆ ಬದುಕಬಹುದು ಎಂಬ ಪಾಠವನ್ನು ಗುರುಗಳು ಹೇಳಿಕೊಟ್ಟಿದ್ದಾರೆ ಎಂದು ಸ್ಮರಿಸಿದರು.

ಹಳೆಯ ವಿದ್ಯಾರ್ಥಿಗಳ ಸಮಿತಿ ಅಧ್ಯಕ್ಷ ಟಿ.ಎಸ್.ಧರ್ಮರಾಜ್ ಮಾತ ನಾಡಿ, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

ನಿವೃತ್ತ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಯಿತು. ನಿವೃತ್ತ ಪ್ರಾಂಶುಪಾಲ ಸಜ್ಜನ ಶೆಟ್ಟರ್, ಟಿ.ಎಚ್. ಕೃಷ್ಣಮೂರ್ತಿ, ಜಯನಾಯ್ಕ, ಕುಮಾರಪ್ಪ, ಸಿದ್ದಪ್ಪ ಮತ್ತಿತರರು ಮಾತನಾಡಿದರು.

ಸಮಾಜ ಸೇವಕ ಟಿ.ಜಿ.ಮಂಜು ನಾಥ್, ಎ.ಎಸ್.ಶಂಕರನಾರಾಯಣ, ಪತ್ರಕರ್ತ ಅನಂತ ನಾಡಿಗ್ ಅವರನ್ನು ಸನ್ಮಾನಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ನಿವೃತ್ತ ಉಪನ್ಯಾಸಕರು, ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪುರಸಭಾ ಮಾಜಿ ಅಧ್ಯಕ್ಷ ಪರಮೇಶ್, ಸದಸ್ಯ ಬಸವರಾಜ್, ಮಾಜಿ ಸದಸ್ಯ ಮಹಮದ್ ಯೂಸುಫ್, ಅಹ್ಮದ್ ಖಾನ್, ಕುಮಾರ ಸ್ವಾಮಿ, ನಾಗರಾಜ್, ಗಣೇಶ್, ಹಾದೀಕೆರೆ ಚಂದ್ರು, ಮನೋಜ್ ಕುಮಾರ್, ಶಿವಶಂಕರ್, ಟಿ.ಜಿ. ರಾಜು, ಸುರೇಶ್, ಪುರಸಭಾ ಸದಸ್ಯರಾದ ಪರಮೇಶ್, ಬಸವರಾಜ್, ದಯಾನಂದ್, ಲೋಹಿತ್, ಸುರೇಶ್, ಕಲ್ಲೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-126-1126515760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.