ತರೀಕೆರೆ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಇಂದು ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಪಟ್ಟಣದ ಸಪ್ತಗಿರಿ ಕನ್ವೆನ್ಷನ್ ಹಾಲ್ನಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆದ ‘ಸ್ತ್ರೀ ಸಂವೇದನಾ ಸಂವಾದ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಹೆಣ್ಣು–ಗಂಡು ಎಂಬ ಭೇದಭಾವಕ್ಕೆ ಅವಕಾಶ ಇರಬಾರದು. ಮಹಿಳೆಯರು ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಇನ್ನಷ್ಟು ಮುಂದುವರೆಯಬೇಕು ಎಂದು ಕರೆ ನೀಡಿದರು.

ಮುಂಬರುವ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಶೇ 33ರ ಮೀಸಲಾತಿ ಜಾರಿಯಾದಲ್ಲಿ ರಾಜ್ಯದಲ್ಲಿ 90ಕ್ಕೂ ಹೆಚ್ಚು ಮಹಿಳಾ ಶಾಸಕರು ಹಾಗೂ ದೇಶದಲ್ಲಿ 250ಕ್ಕೂ ಅಧಿಕ ಮಹಿಳಾ ಸಂಸದರು ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಮಹಿಳೆಯರ ಕಲ್ಯಾಣಕ್ಕಾಗಿ ಸರ್ಕಾರ ಋತುಚಕ್ರ ರಜೆ, ಹೆರಿಗೆ ರಜೆ, ಮಾತೃತ್ವ ರಜೆ, ಮಕ್ಕಳ ಆರೈಕೆ ರಜೆ, ಐದು ವರ್ಷದೊಳಗಿನ ಮಕ್ಕಳನ್ನು ಹೊಂದಿರುವ ಮಹಿಳಾ ನೌಕರರಿಗೆ ಇಚ್ಛಿತ ಸ್ಥಳದಲ್ಲಿ ಸೇವೆ ಸಲ್ಲಿಸಲು ಅವಕಾಶ, ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ಉಚಿತ ಚಿಕಿತ್ಸೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿವರಿಸಿದರು.

ಗಂಡು ಮಕ್ಕಳಿಗೆ ನೀಡುವ ಆದ್ಯತೆಯಷ್ಟೇ ಹೆಣ್ಣು ಮಕ್ಕಳಿಗೂ ನೀಡಬೇಕು. ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯಿತಿ ಸಿಇಒ ಕೀರ್ತನಾ ಅವರ ‘ಭದ್ರ ಬಾಲೆ’ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಹೇಳಿದರು.

ಮಹಿಳೆಯರು ಆತ್ಮವಿಶ್ವಾಸದಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಶಿಕ್ಷಣದ ಮೂಲಕ ಉನ್ನತ ಸ್ಥಾನಕ್ಕೇರಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸ್ಥಿತಿಗೆ ನೆರವಾಗುತ್ತಿವೆ. ಶಕ್ತಿ ಯೋಜನೆಯಿಂದ ಉದ್ಯೋಗಾವಕಾಶಗಳೂ ಹೆಚ್ಚುತ್ತಿವೆ. ಆದಾಗ್ಯೂ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಇನ್ನೂ ಕಂಡುಬರುತ್ತಿರುವುದು ಆತಂಕಕಾರಿ; ಇವು ನಿಲ್ಲಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾನಸಿಕ ವೈದ್ಯೆ ಸುಜಾತ ಅವರು, ಮಹಿಳೆಯರ ಜೀವನಶೈಲಿ ಮತ್ತು ಮಾನಸಿಕ ಆರೋಗ್ಯ ಕುರಿತು ಮಾಹಿತಿ ನೀಡಿ, ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದರು.

ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಮಾತನಾಡಿದರು. ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುನೀತಾ ಸ್ವಾಗತಿಸಿದರು. ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಚರಣ್ ರಾಜ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-126-1688387588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.