ತರೀಕೆರೆ: ತಾಲ್ಲೂಕಿನ ಬೆಟ್ಟದಹಳ್ಳಿಯ ಶ್ರೀ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿ ಈಚೆಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ನಡೆಯಿತು.

ಶಾಲೆಯ ನಿವೃತ್ತ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕುಂಭ ಮೆರವಣಿಗೆ ಹಾಗೂ ವಾದ್ಯಗೋಷ್ಠಿಗಳೊಂದಿಗೆ ಕರೆ ತರಲಾಯಿತು. ಹಳೆಯ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡುವ ಮೂಲಕ ಗುರುಗಳಿಗೆ ಗೌರವ ಸಲ್ಲಿಸಿದರು.

ನಿವೃತ್ತ ಯೋಧ ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಸಾಹಿತಿ ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಿದರು. ಹುಲಿಕಲ್ ನಟರಾಜ್ ಅವರು ಮೂಢನಂಬಿಕೆಗಳ ಬಗ್ಗೆ ಜಾಗೃತಿ ಮೂಡಿಸಿದರು.

ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಹಳೆಯ ವಿದ್ಯಾರ್ಥಿಗಳ ಮಕ್ಕಳು ಪ್ರದರ್ಶಿಸಿದ ಭರತನಾಟ್ಯ ವಿಶೇಷ ಆಕರ್ಷಣೆಯಾಗಿತ್ತು.

ಗೌರವ ಸ್ವೀಕರಿಸಿದ ಶಿಕ್ಷಕರು ಅನುಭವ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಲಾಯಿತು. ಆಡಳಿತ ಮಂಡಳಿಯ ಕಾರ್ಯದರ್ಶಿ ರವಿಕುಮಾರ್, ಡಾ.ಗಿರೀಶ್, ಡಾ. ಸಂತೋಷ್, ಮುಖ್ಯಶಿಕ್ಷಕಿ ಹೇಮಾವತಿ ನೀಲಕಂಠಪ್ಪ, ಶಿಕ್ಷಕರಾದ ಎಚ್.ಆರ್.ಪ್ರಕಾಶ್, ಎಚ್.ಡಿ. ಪ್ರಕಾಶ್, ಓಂಕಾರಪ್ಪ, ಎಚ್.ಜಿ. ಮಲ್ಲೇಶಪ್ಪ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-126-598830869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.