ತರೀಕೆರೆ: ‘ಲಯನ್ಸ್ ಕ್ಲಬ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಕಾರ್ಯಕ್ರಮಗಳು ಮತ್ತು ದೇಣಿಗೆ ಕಾರ್ಯಗಳಿಗೆ ಸದಸ್ಯರು ನೀಡಿದ ಬೆಂಬಲ ಸ್ತುತ್ಯರ್ಹ. ಸಂಸ್ಥೆಯ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯ’ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಎಂ. ಹರೀಶ್ ಹೇಳಿದರು.

ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ವತಿಯಿಂದ 2025– 26ನೇ ಸಾಲಿನಲ್ಲಿ ಕೈಗೊಂಡ ಸಾಮಾಜಿಕ ಸೇವೆಗಳ ವಿವರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತರೀಕೆರೆ ಲಯನ್ಸ್ ಕ್ಲಬ್ ಆರಂಭವಾಗಿ ಮೂರು ವರ್ಷಗಳಲ್ಲೇ ಗಮನಾರ್ಹ ಸಾಮಾಜಿಕ ಸೇವೆಗಳನ್ನು ಹಮ್ಮಿಕೊಂಡಿದೆ. ಕೆಲವು ಕ್ಲಬ್ಗಳು 50 ವರ್ಷಗಳಾದರೂ ಇಷ್ಟೊಂದು ಕಾರ್ಯಕ್ರಮಗಳನ್ನು ನಡೆಸಿಲ್ಲ. ಕಡಿಮೆ ಅವಧಿಯಲ್ಲಿ ಸಂಸ್ಥೆ ಸಾಧನೆ ಮಾಡಿರುವುದರಿಂದ ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಹೆಸರು ಗಳಿಸಿದೆ ಎಂದರು.

ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಕಾರ್ಗಿಲ್ ವಿಜಯ್ ದಿವಸ್ ಆಚರಣೆ, ನೇತ್ರ ಉಚಿತ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಪೀಸ್ ಪೋಸ್ಟರ್ ಕಾರ್ಯಕ್ರಮ, ವನಮಹೋತ್ಸವ, ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ, ಮಾನಸಿಕ ಆರೋಗ್ಯ ಶಿಬಿರ, ಕಡುಬಡವರಿಗೆ ನೆರವು, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಹಾಗೂ ಸರ್ಕಾರಿ ಶಾಲೆಗಳಿಗೆ ವಿವಿಧ ಕೊಡುಗೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಲಯನ್ಸ್ ಕ್ಲಬ್ ಉಪಾಧ್ಯಕ್ಷ ಪ್ರದೀಪ್ ಕುಮಾರ್ ಮಾತನಾಡಿ, ಟಿ.ಎಂ. ಹರೀಶ್ ನೇತೃತ್ವದಲ್ಲಿ ಕಳೆದ ಸಾಲಿನಲ್ಲಿ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. 2026– 27ನೇ ಅವಧಿಗೆ ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಸದಸ್ಯರಿಗೆ ಧನ್ಯವಾದಗಳು. ತಮ್ಮ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶ ಹೊಂದಿದ್ದೇನೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಟಿ.ಆರ್. ಬಸವರಾಜು ಮಾತನಾಡಿ, ಲಯನ್ಸ್ ಕ್ಲಬ್ ಸದಸ್ಯರಾಗಿರುವುದಕ್ಕೆ ಹೆಮ್ಮೆ ಇದೆ. ಸಂಸ್ಥೆಯ ಬೆಳವಣಿಗೆಗೆ ತಮ್ಮ ಬೆಂಬಲ ಮುಂದುವರಿಯಲಿದೆ ಎಂದರು. ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್. ರಮೇಶ್ ಹಾಗೂ ಲಯನ್ಸ್ ಕ್ಲಬ್ ಕಾರ್ಯದರ್ಶಿ ಏಜಾಜ್ ಪಾಷಾ ಮಾತನಾಡಿದರು.

ಪದಾಧಿಕಾರಿಗಳಾದ ರೇವಣ್ಣ ಒಡೆಯರ್, ಟಿ.ಎನ್. ಆನಂದ್, ಟಿ.ಡಿ. ರವಿಕುಮಾರ್, ಟಿ.ಎನ್. ಸೋಮಶೇಖರಯ್ಯ, ಉಮಾ ಪ್ರಕಾಶ್, ಮಂಜುಳ ವಿಜಯಕುಮಾರ್, ಲೋಕೇಶ್, ಆದಿಲ್ ಪಾಷಾ, ಥೈರಾಜ್, ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-397330713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.