ಬೀದರ್: ತೆಲಗಾಂಣದಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಸಿಗುವ ಮೂಲ ಸೌಕರ್ಯ ಒದಗಿಸಬೇಕೆಂದು ತೆಲಗಾಂಣದ ಕನ್ನಡ ಸಂಘಟನೆಗಳಾದ ಓಂ ಸಾಯಿ ರೂರಲ್ ಡೆವಲಮೆಂಟ್ ಸೂಸೈಟಿ ಹಾಗೂ ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘ ಹೈದರಾಬಾದ್ ಸಂಘಟನೆಗಳು ಆಗ್ರಹಿಸಿವೆ.

ಈ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿವೆ.

ಮನವಿ ಸ್ವೀಕರಿಸಿದ ಶಿವಾನಂದ ಬಿ. ಕರಾಳೆ, ಕಾನೂನು ಪ್ರಕಾರ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಕನ್ನಡಿಗರ ಜೀವನ ಮತ್ತು ಕನ್ನಡ ಸ್ಥಿತಿಗತಿ ಕುರಿತ ವರದಿ ಜಿಲ್ಲಾಡಳಿತದಿಂದ ಕಳಿಸಲು ಪ್ರಯತ್ನಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಲಕ್ಷಾಂತರ ಸಂಖ್ಯೆಯಲ್ಲಿ ಕನ್ನಡ ಭಾಷಿಕರು ಹಲವು ದಶಕಗಳಿಂದ ತೆಲಂಗಾಣದಲ್ಲಿ ನೆಲೆಸಿದ್ದಾರೆ. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಅಸ್ತಿತ್ವವನ್ನು ಕಾಪಾಡಿಕೊಳ್ಳಲು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದಾಗ್ಯೂ ಇಂದಿಗೂ ಈ ಭಾಗದ ಕನ್ನಡಿಗರು ಶಿಕ್ಷಣ, ಉದ್ಯೋಗ ಹಾಗೂ ಆಡಳಿತಾತ್ಮಕ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸಿ ಕರ್ನಾಟಕ ಸರ್ಕಾರ ಗಮನಕ್ಕೆ ತರಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಯಿತು.

ತೆಲಗಾಂಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣ ಖೇಡ ತಾಲ್ಲೂಕಿನ ಕಾರಾಮುಂಗಿ, ಔದತ್ಪುರ, ಯಸಗಿ, ಗೌಡಗಾಂವ್, ಶಹಾಪುರ, ಮೂರ್ಗಿ, ಶಿಖರಖಾನ್, ಗೂಂದೆಗಾಂವ್, ರತ್ನಾಪುರ, ಮಂಗಲಗಿ, ಮೈನಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕನ್ನಡ ಶಾಲೆಗಳು ಜೀವಂತವಾಗಿವೆ. ಈ ಕನ್ನಡ ಶಾಲೆಗಳನ್ನು ಉಳಿಸುವ ಪ್ರಯತ್ನ ಕರ್ನಾಟಕ ಸರ್ಕಾರ ಮಾಡಬೇಕೆಂದು ಆಗ್ರಹಿಸಲಾಯಿತು.

ಓಂ ಸಾಯಿ ರೂರಲ್ ಡೆವಲಮೆಂಟ್ ಸೂಸೈಟಿ ಅಧ್ಯಕ್ಷ ಶಿವಶರಣಪ್ಪ ಗಣೇಶಪೂರ್, ಕನ್ನಡಿಗರ ಕಲ್ಯಾಣ ಅಭಿವೃದ್ಧಿ ಸಂಘ ಹೈದರಾಬಾದ್ ಘಟಕದ ಅಧ್ಯಕ್ಷ ಧರ್ಮೇಂದ್ರ ಪೂಜಾರಿ ಬಗದೂರಿ, ಜಗನ್ನಾಥ ಹೆಬ್ಬಾಳೆ, ರಾಜಕುಮಾರ ಹೆಬ್ಬಾಳೆ, ನಾಗಪ್ಪಾ ಸಾಮಾಜಿಕ ಸಾಂಸ್ಕೃತಿಕ ಮತ್ತು ಸೇವಾ ಸಂಸ್ಥೆ ಅಧ್ಯಕ್ಷ ಭೀಮರಾವ ಬೀದರಕರ್, ಪತ್ರಕರ್ತ ರಾಜಕುಮಾರ ಮಡಕಿ ಇನ್ನಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-33-1231221629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.