ಕೆ.ಆರ್. ಪೇಟೆ: ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಕ್ರಿಯಾಶೀಲತೆ ಹೆಚ್ಚಿಸಲು ನೆರವಾಗುತ್ತವೆ ಎಂದು ತೆಂಡೇಕೆರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಮ್ಯ ಹೇಳಿದರು.

ತಾಲ್ಲೂಕಿನ ತೆಂಡೇಕೆರೆ ಗ್ರಾಮದಲ್ಲಿ ಮಂಗಳವಾರ ನಡೆದ ಮಕ್ಕಳ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಜೆ ಅವಧಿಯಲ್ಲಿ ಚಟುವಟಿಕೆಯಿಂದಿರುವಂತೆ ಮಾಡುವ ಉದ್ದೇಶದಿಂದ ಮಕ್ಕಳಿಗೆ ಒಂದು ತಿಂಗಳಿಂದ ಬೇಸಿಗೆ ಶಿಬಿರ ನಡೆದಿದೆ ಎಂದರು.

ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಸುವ ಜಿಲ್ಲಾ ಪಂಚಾಯಿತಿ ಸಿಇಒ ಅವರ ನಿರ್ಧಾರ ಸಮಯೋಚಿತವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೇಖಾ ಮಾತನಾಡಿ, ಮಕ್ಕಳಿಗೆ ಸೃಜನಾತ್ಮಕ ಚಟುವಟಿಕೆಗಳು, ಸಂಗೀತ, ಹಾಡು, ನೃತ್ಯ, ಕಲೆ ಒಳಾಂಗಣ ಕ್ರೀಡೆಯ ಬಗ್ಗೆ ತಿಳಿಸಲಾಯಿತು. ಮಕ್ಕಳು ಸ್ಪಂದಿಸಿದ್ದಾರೆ ಎಂದರು. ಉಪನ್ಯಾಸಕಿ ಪುಷ್ಪಾ, ಮುಖ್ಯಶಿಕ್ಷಕ ರಾಜು, ಗ್ರಾಮ ಪಂಚಾಯಿತಿಯ ಕುಮಾರ್, ಶಿವಕುಮಾರ್, ನಾಗೇಶ್ ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-40-853506479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.