ತಿಪಟೂರು: ನಗರದ ಕಲ್ಪತರು ವಿದ್ಯಾಸಂಸ್ಥೆಯಿಂದ ಕಲ್ಪತರು ಕ್ರೀಡಾಂಗಣದಲ್ಲಿ ಶನಿವಾರ ‘ಕಲ್ಪವೈಭವ’ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸತ್ಕಾರ, ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಿರುತೆರೆ, ರಂಗಭೂಮಿ ಕಲಾವಿದ ಶ್ರೀನಾಥ್ ವಸಿಷ್ಠ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಏಕಾಗ್ರತೆ, ಸೂಕ್ಷ್ಮತೆ, ಪರಿಶ್ರಮದಿಂದ ವ್ಯಾಸಂಗ ಮಾಡಿದರೆ ಎಲ್ಲವನ್ನು ಸಾಧಿಸಬಹುದು. ಕಾಲೇಜಿನ ಶಿಕ್ಷಕರು ಬೋಧಿಸುವುದನ್ನು ತಲೆಗೆ ಸ್ವೀಕರಿಸುವ ಜೊತೆಗೆ ಹೃದಯಕ್ಕೆ ಸ್ವೀಕರಿಸಿದರೆ ಶಾಶ್ವತವಾಗಿ ಉಳಿಯುತ್ತದೆ ಎಂದರು.

ಕಾರ್ಯದರ್ಶಿ ಎಚ್.ಜಿ. ಸುಧಾಕರ್ ಮಾತನಾಡಿ, ಕಲ್ಪತರು ವಿದ್ಯಾಸಂಸ್ಥೆಗೆ 64 ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕಲ್ಪತರು ಇಂಜಿನಿಯರಿಂಗ್ ಕಾಲೇಜು ಪ್ರಾರಂಭವಾಗಿ 40 ವರ್ಷ ಕಳೆದಿದೆ. ಇಂತಹ ಸನ್ನಿವೇಶದಲ್ಲಿ ಈಗಿರುವ ಪದಾಧಿಕಾರಿಗಳೆಲ್ಲರ ಬದ್ಧತೆ, ಇಚ್ಛಾಶಕ್ತಿಯಿಂದ ಸಂಸ್ಥೆಯು ₹40 ಕೋಟಿ ವಹಿವಾಟು ನಡೆಸುತ್ತಿದೆ ಎಂದರು.

ತಹಶೀಲ್ದಾರ್ ಜಿ.ವಿ.ಮೋಹನ್ಕುಮಾರ್, ಪೊಲೀಸ್ ಅಧಿಕಾರಿ ಕೃಷ್ಣಪ್ಪ, ಸಂಸ್ಥೆ ಉಪಾಧ್ಯಕ್ಷ ಜಿ.ಪಿ.ದೀಪಕ್, ಬಾಗೇಪಲ್ಲಿ ನಟರಾಜು, ಟಿ.ಎಸ್.ಬಸವರಾಜು, ಕಾರ್ಯದರ್ಶಿಗಳಾದ ಜಿ.ಎಸ್.ಉಮಾಶಂಕರ್, ಎಂ.ಆರ್.ಸಂಗಮೇಶ್, ಟಿ.ಯು.ಜಗದೀಶಮೂರ್ತಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಗುಂಡಪ್ಪ, ಪಲ್ಲಾಗಟ್ಟಿ ಕಾಲೇಜಿನ ಪ್ರಾಂಶುಪಾಲ ಡಾ.ವಿಜಯಕುಮಾರಿ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಸೋಮಶೇಖರಪ್ಪ, ಉಮೇಶ್, ಲಲಾಟಕ್ಷಮೂರ್ತಿ, ಎಲ್ಲ ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-17-1715069994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.