ನಿಟ್ಟೂರು (ಗುಬ್ಬಿ): ‘ಶಿಕ್ಷಣದಿಂದಲೇ ಸಾಮಾಜಿಕ ಬದಲಾವಣೆ ಇರುವುದರಿಂದ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಪ್ರೇರೇಪಿಸಬೇಕು’ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ಹೇಳಿದರು.

ಭಾನುವಾರ ನಿಟ್ಟೂರು ಹೋಬಳಿ ಚಿಕ್ಕಹಳ್ಳಿಯಲ್ಲಿ ಕುಂಚಿಟಿಗ ಕ್ಷೇಮಾಭಿವೃದ್ಧಿ ಸಂಘದಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳು ಸಿಕ್ಕಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಮಹತ್ತರ ಸಾಧನೆ ಮಾಡುವತ್ತ ಗಮನ ಹರಿಸಬೇಕು. ಪೋಷಕರು ತಮ್ಮ ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳುವ ಕಾಣುವ ಕನಸು ಕಟ್ಟಿಕೊಂಡಿರುತ್ತಾರೆ. ಪೋಷಕರ ಮನಸ್ಸಿಗೆ ನೋವಾಗದಂತೆ ನಡೆದುಕೊಂಡು ಸಂಸ್ಕಾರ ರೂಢಿಸಿಕೊಂಡು ಸಮಾಜದಲ್ಲಿ ಗೌರವಯುತ ಬದುಕು ಕಟ್ಟಿಕೊಳ್ಳುವಂತೆ ಹೇಳಿದರು.

ಸಮುದಾಯದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡದೇ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ಸಮುದಾಯಕ್ಕೆ ಅಗತ್ಯವಿರುವ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರು ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್.ಆರ್ ಶ್ರೀನಿವಾಸ್ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸಿಕೊಡಬೇಕಿದೆ. ಪೋಷಕರಿಂದ ಉತ್ತಮ ಭವಿಷ್ಯ ಕಟ್ಟಿಕೊಳ್ಳುವ ಮಕ್ಕಳು ಪೋಷಕರ ವೃದ್ದಾಪ್ಯದಲ್ಲಿ ಅವರನ್ನು ಕಡೆಗಣಿಸುತ್ತಿರುವುದು ದುರದೃಷ್ಟಕರ. ಪ್ರತಿಭಾ ಪುರಸ್ಕಾರ ಮಕ್ಕಳ ಜವಾಬ್ದಾರಿಯನ್ನು ಹೆಚ್ಚಿಸುವುದು. ಜವಾಬ್ದಾರಿ ಅರಿತು ಮಕ್ಕಳು ಉತ್ತಮ ಬದುಕು ಕಟ್ಟಿಕೊಳ್ಳುವಂತೆ ತಿಳಿಸಿದರು.

ಕಾಂಗ್ರೆಸ್ ಮುಖಂಡ ಮುರುಳೀಧರ ಹಾಲಪ್ಪ ಮಾತನಾಡಿ, ಸಮುದಾಯದ ಮಕ್ಕಳ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಸಮುದಾಯದವರೆಲ್ಲರೂ ಹಣವನ್ನು ಮೀಸಲಿಟ್ಟು, ಅನುಕೂಲ ಮಾಡಿಕೊಡುವತ್ತ ಚಿಂತನೆ ನಡೆಸಬೇಕಿದೆ. ಶಿಕ್ಷಣದ ಮಹತ್ವವನ್ನು ಅರಿತು ಸಮುದಾಯದವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಆದ್ಯತೆ ನೀಡಬೇಕು ಎಂದು ಹೇಳಿದರು.

ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ವೈ.ಜೆ ಜಯಣ್ಣ, ಜಿ.ಆರ್ ರಂಗನಾಥ್, ಡಿ.ಬಿ ರವೀಂದ್ರನಾಥ್, ಸುಧಾಕರ್, ಬಾಣಯ್ಯ, ಮುಕುಂದಪ್ಪ ಹೆಂಜಾರಪ್ಪ, ಗಂಗಣ್ಣ, ಮೂಡಲ ಗಿರಿಯಪ್ಪ, ಲಕ್ಷ್ಮಿವೆಂಕಟೇಶ್ವರ ಸೇವಾ ಸಮಿತಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಭಾಗವಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-17-982011679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.