ತುಮಕೂರು: ವಿದ್ಯಾರ್ಥಿಗಳಲ್ಲಿ ಸವಾಲು ಎದುರಿಸುವ ಧೈರ್ಯ, ನಿರಂತರವಾಗಿ ಕಲಿಯುವ ಹಂಬಲ ಇರಬೇಕು ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್ ಹೇಳಿದರು.

ನಗರದಲ್ಲಿ ಶುಕ್ರವಾರ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜು, ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ವಿದ್ಯಾವಾಹಿನಿ ಪ್ಯಾರಾ ಮೆಡಿಕಲ್ ಕಾಲೇಜುಗಳ ವಾರ್ಷಿಕ ಸಾಂಸ್ಕೃತಿಕ ಹಬ್ಬ ‘ವಿವಿಯನ್ ವೈಭವ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉದ್ಯೋಗ ಪಡೆಯುವುದು ಶಿಕ್ಷಣದ ಅಂತಿಮ ಗುರಿಯಲ್ಲ. ಸಮಾಜದ ಸಮಸ್ಯೆಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಸಂವೇದನಾಶೀಲ ಮನುಷ್ಯನಾಗುವುದು ಮುಖ್ಯ. ವೃತ್ತಿ ಬದುಕಿನ ಸಾರ್ಥಕತೆ ದೇಶದ ಸಮಗ್ರ ಪ್ರಗತಿಗೆ ಪೂರಕವಾಗಬೇಕು. ನಮ್ಮ ಸಂಸ್ಥೆಯ ಗುರಿ ಕೇವಲ ಸಾಕ್ಷರರನ್ನು ರೂಪಿಸುವುದಲ್ಲ. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ಕೊಡುಗೆಯಾಗಿ ನೀಡುವುದು ಎಂದರು.

ಸಾಧಕ ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯ, ನಗದು ಬಹುಮಾನ ನೀಡುವ ಮೂಲಕ ಅವರ ಶ್ರಮವನ್ನು ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದು, ಇದರಿಂದ ಅವರಲ್ಲಿ ನಾಯಕತ್ವ ಗುಣ ಬೆಳೆಯಲಿದೆ ಎಂದು ತಿಳಿಸಿದರು.

ಪತ್ರಕರ್ತ ರವಿ ಹೆಗಡೆ, ‘ಈಗ ಪ್ರತಿಯೊಬ್ಬರ ಜೇಬಿನಲ್ಲಿ ತಂತ್ರಜ್ಞಾನವಿದೆ. ಅದನ್ನು ಕೇವಲ ಮನರಂಜನೆ, ನಕಲು ಮಾಡಲು ಬಳಸದೆ, ಜ್ಞಾನಾರ್ಜನೆಯ ಪೂರಕ ಸಾಧನವಾಗಿ ಬಳಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಅತಿಯಾಗಿ ಮೊಬೈಲ್ ನೋಡುವುದರಿಂದ ಏಕಾಗ್ರತೆ, ನೆನಪಿನ ಶಕ್ತಿ ಕುಂಠಿತವಾಗುತ್ತಿದೆ’ ಎಂದು ಎಚ್ಚರಿಸಿದರು.

ವಿದ್ಯಾವಾಹಿನಿ ಸಮೂಹ ಸಂಸ್ಥೆಅಧ್ಯಕ್ಷ ಕೆ.ಬಿ.ಜಯಣ್ಣ, ಪ್ರಾಂಶುಪಾಲರಾದ ಎ.ಅರುಣಾ, ಹುಮೇರಾ ಪರ್ವೀನ್, ಸಂಯೋಜಕ ಸಿದ್ಧೇಶ್ವರಸ್ವಾಮಿ ಇತರರು ಹಾಜರಿದ್ದರು. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-17-2040848643

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.