ತುಮಕೂರು: ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಹೆಸರಿನಲ್ಲಿ ಕನ್ನಡ ಮಾಧ್ಯಮಕ್ಕೆ ಕುತ್ತು ತರುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ನಗರದ ಟೌನ್ಹಾಲ್ ವೃತ್ತದಲ್ಲಿ ಈಚೆಗೆ ಪ್ರತಿಭಟನೆ ನಡೆಯಿತು.

ಕನ್ನಡ ಮಾಧ್ಯಮ ತೆಗೆದುಹಾಕಿ ಇಂಗ್ಲಿಷ್ ಮಾಧ್ಯಮ ಕಡ್ಡಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಘೋಷಣೆ ಕೂಗಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ‘ರಾಜ್ಯದಲ್ಲಿ ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಹೇರಿಕೆ ಮಾಡಿ, ಕನ್ನಡವನ್ನೇ ಮರೆಮಾಚುವ ಹುನ್ನಾರವನ್ನು ರಾಜ್ಯ ಸರ್ಕಾರ ರೂಪಿಸಿದೆ. ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯ ಮೂಲಕ ಕೊಡುವುದರಿಂದ ಮಗುವಿನ ಬೌದ್ಧಿಕ ಮಟ್ಟ ಹೆಚ್ಚುತ್ತದೆ. ಮಾನಸಿಕವಾಗಿ ಸದೃಢವಾಗಲು ಸಹಾಯವಾಗುತ್ತದೆ’ ಎಂದು ಹೇಳಿದರು.

ರಾಜ್ಯದ 4,404 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಸರ್ಕಾರ ಆದೇಶಿಸಿದೆ. ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಕೆಲವು ಶಾಲೆಗಳಲ್ಲಿ ಜೂನ್ನಿಂದ ಕನ್ನಡ ಮಾಧ್ಯಮ ಇರುವುದಿಲ್ಲ ಎಂದರು.

ಸಮಿತಿ ಪದಾಧಿಕಾರಿಗಳಾದ ಮೋಸಿನಬಾನು, ಭರತ್ ಸೈಯದ್, ಸಂದೀಪ್, ಮಂಜುಳ, ಗೌಸ್ಪೀರ್, ಶಿವಪ್ರಕಾಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-17-446598936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.