ತುಮಕೂರು: ‘ಮನೆಗಳಲ್ಲಿ ಪೂಜಾ ಕೋಣೆ ಎಷ್ಟು ಮುಖ್ಯವೋ, ಗ್ರಂಥಾಲಯ ಕೊಠಡಿಯೂ ಅಷ್ಟೇ ಮುಖ್ಯ’ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಸಲಹೆ ಮಾಡಿದರು.

ತುಮಕೂರು ತಾಲ್ಲೂಕಿನ ಯಲ್ಲಾಪುರ ಗ್ರಾಮದಲ್ಲಿ ಎಸ್.ಆರ್.ಚಂದ್ರಪ್ಪ ಅವರ ಮನೆಯಲ್ಲಿ ಸೋಮವಾರ ಪುಸ್ತಕ ಮನೆ (ಗ್ರಂಥಾಲಯ) ಉದ್ಘಾಟಿಸಿ ಮಾತನಾಡಿದರು.

‘ಪ್ರಾಧಿಕಾರದ ಅಧ್ಯಕ್ಷನಾದ ಮೇಲೆ ಎರಡು ಯೋಜನೆ ಕೈಗೆತ್ತಿಕೊಂಡಿದ್ದು, ‘ಅಂಗಳದಲ್ಲಿ ತಿಂಗಳ ಪುಸ್ತಕ’, ‘ಮನೆಗೊಂದು ಗ್ರಂಥಾಲಯ’ ಜಾರಿ ಮಾಡಿದ್ದೇನೆ. ಅಂಗಳದಲ್ಲಿ ತಿಂಗಳ ಪುಸ್ತಕ ಯೋಜನೆಯಲ್ಲಿ ನೂರು ವರ್ಷ ಕಳೆದಿರುವ ವ್ಯಕ್ತಿಗಳ ಕೃತಿಗಳ ಬಗ್ಗೆ ಶಾಲಾ, ಕಾಲೇಜುಗಳಲ್ಲಿ ಪರಿಚಯ ಮಾಡಿಕೊಡಲಾಗುತ್ತದೆ. ‘ಮನೆಗೊಂದು ಗ್ರಂಥಾಲಯ’ ಯೋಜನೆಯಲ್ಲಿ ರಾಜ್ಯದಾದ್ಯಂತ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಹತ್ತು ಮಂದಿ ಸಾಹಿತಿಗಳ ಜಾಗ್ರತ ಸಮಿತಿ ರಚಿಸಲಾಗಿದೆ. ಜಿಲ್ಲೆಯಲ್ಲಿ ಚಂದ್ರಪ್ಪ ಅವರ ಮನೆಯಿಂದ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಂಥಾಲಯ ಹೊಂದಿರುವ ಮನೆಗಳಿಗೆ ಭೇಟಿ ನೀಡಲಾಗುವುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಹತ್ತು ಮನೆಗಳನ್ನು ಗುರುತಿಸಿ ಗ್ರಂಥಾಲಯದ ಬಗ್ಗೆ ಜಾಗೃತಿ ಮಾಡಿಸಲಾಗುವುದು’ ಎಂದು ತಿಳಿಸಿದರು.

ಸಾಹಿತಿಗಳಾ ಹೊಲತಾಳು ಸಿದ್ಧಗಂಗಯ್ಯ, ಯಲಚಿಗೆರೆ ಉಮೇಶ, ನಾಗೇಂದ್ರಪ್ಪ ರೊಪ್ಪ, ಚಿಕ್ಕಬೆಳ್ಳಾವಿ ಶಿವಕುಮಾರ್, ಬಾ.ಪೂ.ಜಯದೇವಯ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-1510348443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.