ತುಮಕೂರು: ಪಿ.ಎಂ.ಶ್ರೀ ಯೋಜನೆ ಹೆಸರಿನಲ್ಲಿ ರಾಜ್ಯದ 317 ಸರ್ಕಾರಿ ಶಾಲೆಗಳ ವಿಲೀನಕ್ಕೆ ಸರ್ಕಾರ ಆದೇಶ ಹೊರಡಿಸಿರುವುದನ್ನು ಎಐಡಿಎಸ್ಒ ಖಂಡಿಸಿದೆ.

‘ರಾಜ್ಯದ ಜನತೆಯ ತೀವ್ರ ವಿರೋಧದ ಮಧ್ಯೆಯೂ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆ ಮುಚ್ಚಲಾಗುತ್ತಿದೆ. ಇದೀಗ ಪಿ.ಎಂ.ಶ್ರೀ ಶಾಲೆಗೆ ಹತ್ತಿರದ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತದೆ’ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಸಿ.ಬಿ.ಲಕ್ಕಪ್ಪ ತಿಳಿಸಿದ್ದಾರೆ.

‘ಶಿಕ್ಷಣಕ್ಕೆ 8 ಗ್ಯಾರಂಟಿ ನೀಡಿ ದೇಶದಲ್ಲಿಯೇ ಮಾದರಿ ಶಾಲಾ ವ್ಯವಸ್ಥೆ ನಿರ್ಮಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಈ ಗ್ಯಾರಂಟಿಗಳು ಮೋಸದಿಂದ ಕೂಡಿವೆ. ಸರ್ಕಾರಿ ಶಾಲೆ ಮುಚ್ಚುವ ಅಂಶವನ್ನು ನಯವಾಗಿ ತಳ್ಳಿ ಹಾಕುತ್ತಾ, ಗ್ಯಾರಂಟಿ ಮುಖವಾಡದಲ್ಲಿ ನಾಡಿನ ಜನತೆಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ‘ ಎಂದು ಆರೋಪಿಸಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅನೇಕ ಶಾಲೆಗಳನ್ನು ವಿಲೀನಗೊಳಿಸುವ ಅಧಿಕೃತ ಪಟ್ಟಿ ಈಗಾಗಲೇ ಹೊರ ಬಿದ್ದಿದೆ. ಇದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ತನ್ನ ಹಠಮಾರಿ ಧೋರಣೆ ಕೈ ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-17-1110133543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.