ತುಮಕೂರು: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಬೇಕು. ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಆರೋಗ್ಯ ಸುಧಾರಣೆಗೆ ನೆರವಾಗುತ್ತವೆ ಎಂದು ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಹೇಳಿದರು.

ನಗರದ ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಂಸ್ಥಾಪಕರ ದಿನ ಮತ್ತು ಕಲೆ, ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡೆ ಮನುಷ್ಯನ ದೈಹಿಕ ಆರೋಗ್ಯ ಕಾಪಾಡುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿಡುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ ಎಂದರು.

ಉತ್ತಮ ಅಂಕ ಪಡೆದ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಿದ್ಧಗಂಗಾ ಪದವಿ ಕಾಲೇಜುಗಳ ಸಂಯೋಜಕ ಡಿ.ಎನ್.ಯೋಗೀಶ್ವರಪ್ಪ, ಪ್ರಾಂಶುಪಾಲ ಟಿ.ಬಿ.ನಿಜಲಿಂಗಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಉದಯಕುಮಾರ್, ವೈ.ಎಸ್.ರತ್ನಮ್ಮ, ಕೆ.ಎಲ್.ಶ್ರೀವಲ್ಲಿ, ಎನ್ಸಿಸಿ ಅಧಿಕಾರಿಗಳಾದ ರಾಮ ಲಿಂಗಾರೆಡ್ಡಿ, ಶೃತಿ, ಕುಮಾರಸ್ವಾಮಿ, ಮೋಹನಕುಮಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-17-1607314945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.