ತುಮಕೂರು: ಎಂಜಿನಿಯರಿಂಗ್ ಕಾಲೇಜು ಸೇರ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡುವ ಸಲುವಾಗಿ ಮೇ 10ರಂದು ಪ್ರತಿಭಾ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆ ಮುಖ್ಯಸ್ಥ ಡಾ.ಎಂ.ಆರ್.ಹುಲಿನಾಯ್ಕರ್ ಇಲ್ಲಿ ಗುರುವಾರ ತಿಳಿಸಿದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಂಸ್ಥೆಯು ವಾರ್ಷಿಕ ₹2 ಕೋಟಿ ವೆಚ್ಚ ಮಾಡಲಿದೆ. ಅವಕಾಶ ವಂಚಿತರಿಗೆ ಕಾಲೇಜಿನಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮೊದಲ 11 ಮಂದಿಗೆ ನಾಲ್ಕು ವರ್ಷ ಉಚಿತವಾಗಿ ಎಂಜಿನಿಯರಿಂಗ್ ಶಿಕ್ಷಣ ನೀಡಲಾಗುತ್ತದೆ. 11ರಿಂದ 30ನೇ ರ್ಯಾಂಕ್ ಪಡೆದವರಿಗೆ ಸಿಇಟಿ ಶುಲ್ಕ ಮಾತ್ರ ತೆಗೆದುಕೊಳ್ಳಲಾಗುತ್ತದೆ. 31ರಿಂದ 60ನೇ ರ್ಯಾಂಕ್ ಪಡೆದವರಿಗೆ ಶೇ 25ರಷ್ಟು ನೆರವು ನೀಡಿ, ಬೋಧನಾ ಶುಲ್ಕ ಮನ್ನಾ ಮಾಡಲಾಗುತ್ತದೆ ಎಂದು ವಿವರಿಸಿದರು.

ಈಗಾಗಲೇ 1,300ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದು, 2 ಸಾವಿರ ಗಡಿ ದಾಟುವ ನಿರೀಕ್ಷೆ ಇದೆ. ಕಾಲೇಜಿನಲ್ಲಿ ಮೇ 10ರಂದು ಪರೀಕ್ಷೆ ನಡೆಯಲಿದೆ ಎಂದರು.

ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಉಪಪ್ರಾಂಶುಪಾಲ ಚಂದ್ರಶೇಖರ್, ಎಂಬಿಎ ವಿಭಾಗದ ಮುಖ್ಯಸ್ಥ ರಾಮಕೃಷ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-1742382176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.