ತುಮಕೂರು: ತುಮಕೂರು ವಿಶ್ವವಿದ್ಯಾಲಯದ 19ನೇ ಘಟಿಕೋತ್ಸವ ಜೂನ್ 3ರಂದು ವಿ.ವಿ ಆವರಣದಲ್ಲಿ ನಡೆಯಲಿದೆ.

ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅವಧಿ ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಘಟಿಕೋತ್ಸವ ಮಾಡಿ ಮುಗಿಸಲಾಗುತ್ತಿದೆ. ಕುಲಪತಿಯ ಕೊನೆಯ ಘಟಿಕೋತ್ಸವ ಇದಾಗಿದೆ.

2023 ಮತ್ತು 2024ರಲ್ಲಿ ತಡವಾಗಿ ಘಟಿಕೋತ್ಸವ ಆಯೋಜಿಸಲಾಗಿತ್ತು. ಎರಡು ವರ್ಷ ಆಗಸ್ಟ್ 7ರಂದು ಸಮಾರಂಭ ನಡೆದಿತ್ತು. 2025ರಲ್ಲಿ ಜುಲೈ 8ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಬಾರಿ ಹಿಂದಿನ ಸಲಕ್ಕಿಂತ ಒಂದು ತಿಂಗಳು ಮುಂಚಿತವಾಗಿ ದಿನಾಂಕ ನಿಗದಿ ಪಡಿಸಲಾಗಿದೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ ಎರಡು ವರ್ಷಗಳ ಘಟಿಕೋತ್ಸವಕ್ಕೆ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ನೇತೃತ್ವ ವಹಿಸಿದ್ದರು. ಈ ಬಾರಿಯೂ ಅವರ ನೇತೃತ್ವದಲ್ಲಿ ಸಮಾರಂಭ ಏರ್ಪಡಿಸಲಾಗಿದೆ.

‘ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಮೂವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ಹೆಸರು ಕಳುಹಿಸಲಾಗಿದೆ. ಮುಂದಿನ ಎರಡು–ಮೂರು ದಿನಗಳಲ್ಲಿ ಅಂತಿಮ ಪಟ್ಟಿ ವಿ.ವಿಗೆ ತಲುಪಲಿದೆ’ ಎಂದು ಮೂಲಗಳು ತಿಳಿಸಿವೆ.

ಘಟಿಕೋತ್ಸವದ ಪ್ರಯುಕ್ತ ಮೇ 29ರಂದು ಮಧ್ಯಾಹ್ನ 3 ಗಂಟೆಗೆ ವಿಶ್ವವಿದ್ಯಾಲಯ ಆವರಣದ ಪರೀಕ್ಷಾ ಭವನದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಡಿ.ಲಿಟ್, ಪಿಎಚ್.ಡಿ, ಚಿನ್ನದ ಪದಕ, ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಭಾಗವಹಿಸುವಂತೆ ಸೂಚಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-17-138382186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.