ಕೋಲಾರ: ಕೃಷಿ ಪದ್ಧತಿ, ಕೃಷಿ ಮಾರುಕಟ್ಟೆ, ಆನ್ಲೈನ್ ವಹಿವಾಟು ಕುರಿತು ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ನಗರದಲ್ಲಿ ಸಂವಾದ ಮತ್ತು ಚರ್ಚೆ ನಡೆಯಿತು.

ಟೊಮೆಟೊ ಬೆಳೆಗಾರ ಹಾಗೂ ಮಂಡಿ ಮಾಲೀಕ ಸಿಎಂಆರ್ ಶ್ರೀನಾಥ್ ಜೊತೆ ಸಾಂಪ್ರದಾಯಿಕ ಮಾರುಕಟ್ಟೆ ವ್ಯವಸ್ಥೆಯಿಂದ ಹಿಡಿದು ಈಗಿನ ಎಐ ವರೆಗೆ ಕೃಷಿ ಮತ್ತು ಮಾರುಕಟ್ಟೆಯ ವಿವಿಧ ವಿಚಾರಗಳನ್ನು ವಿದ್ಯಾರ್ಥಿಗಳು ಚರ್ಚಿಸಿದರು.

ಕೃಷಿ ಉತ್ಪನ್ನಗಳ ಬೇಡಿಕೆ, ಪೂರೈಕೆಯಲ್ಲಿ ಸಮತೋಲನ ಕಾಪಾಡುವುದು ಹಾಗೂ ಖಾಸಗಿ ಕಂಪನಿಗಳ ಪಾತ್ರದ ಕುರಿತು ಪ್ರಶ್ನೆ ಕೇಳಿದರು.

ಉತ್ಪನ್ನಗಳನ್ನು ಶೀತಲಗೃಹಗಳಲ್ಲಿ ಶೇಖರಣೆ ಹಾಗೂ ಮೌಲ್ಯಾಧಾರಿತ ಉತ್ಪನ್ನಗಳ ತಯಾರಿಕೆ ಮತ್ತು ಅವುಗಳ ಮಾರಾಟದಿಂದ ವ್ಯವಸ್ಥೆಯಲ್ಲಿ ಸುಧಾರಿಸಬಹುದಾಗಿದೆ ಎಂದು ಸಿಎಂಆರ್ ಶ್ರೀನಾಥ್ ತಿಳಿಸಿದರು.

ರೈತರಿಗೆ ಅತ್ಯುತ್ತಮ ಬೆಲೆ ಸಿಗುವಂತೆ, ಗ್ರಾಹಕರಿಗೆ ಹೊರೆಯಾಗದಂತೆ ಪಾರದರ್ಶಕ ವಹಿವಾಟು ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ರೀತಿಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಕಾರ್ಯ ಪ್ರವೃತ್ತರಾದರೆ ಆರ್ಥಿಕ ವ್ಯವಸ್ಥೆ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ರವೀಂದ್ರಕುಮಾರ್ ಹಾಗೂ ಸಹ ಪ್ರಾಧ್ಯಾಪಕರಾದ ಮುನಿರಾಜು, ನೀಲಕಂಠ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-18-228040234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.