ತುಮಕೂರು: ನಗರ ಹೊರವಲಯದ ವರಿನ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವರಿನ್ ಶಾಲೆಯು 2025–26ನೇ ಸಾಲಿನ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿದೆ. ಒಟ್ಟು 134 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 82 ವಿದ್ಯಾರ್ಥಿ ಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಎನ್.ಡಿ.ಬಬಿತಾ ಶೇ 99ರಷ್ಟು ಅಂಕ ಗಳಿಸಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಿ.ಧವನ್ ಶೇ 98.2 ಅಂಕ ಗಳಿಸಿದ್ದಾರೆ. ಎಂ.ಧನ್ವಿ ಶೇ 97.20 ಅಂಕ ಗಳಿಸಿದ್ದಾರೆ. ಒಟ್ಟು 27 ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಮಕ್ಕಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ಶಾಲೆ, ಶಿಕ್ಷಕರು ಮತ್ತು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಶೈಕ್ಷಣಿಕ ಸಾಧನೆಗೆ ಸಹಕಾರ, ಉತ್ತೇಜನ, ಮಾರ್ಗದರ್ಶನ ನೀಡಿದವರನ್ನು ನೆನಪಿಸಿಕೊಂಡರು.

ವಿರಾಟ್ ಟ್ರಸ್ಟ್ ಅಧ್ಯಕ್ಷ ಕೃಷ್ಣಯ್ಯ, ಕಾರ್ಯದರ್ಶಿ ಮಮತಾ ಸುರೇಶ್, ನಿರ್ದೇಶಕಿ ಅಮ್ಮಜಮ್ಮ, ಸಿಇಒ ಕೃಷ್ಣಪ್ಪ, ಪ್ರಾಂಶುಪಾಲ ಎಸ್.ಕೆ.ಶಿವಕುಮಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-17-1599522175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.