ತುಮಕೂರು: ವಿದ್ಯೋದಯ ಕಾನೂನು ಕಾಲೇಜಿನ ರೆಡ್ಕ್ರಾಸ್, ಎನ್ಎಸ್ಎಸ್ ಘಟಕದಿಂದ ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಸಿದ್ಧಾರ್ಥ ಕಾಲೇಜಿನ ಪ್ರಾಧ್ಯಾಪಕ ಡಾ.ರಾಜೇಂದ್ರ ಪ್ರಸಾದ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನದ ಮಹತ್ವದ ಕುರಿತು ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಅತ್ಯಂತ ಕ್ರಿಯಾಶೀಲವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸುವಂತೆ ಸಲಹೆ ಮಾಡಿದರು.

ವಿದ್ಯೋದಯ ಫೌಂಡೇಷನ್ ಟ್ರಸ್ಟ್ನ ಟ್ರಸ್ಟಿ ಎಚ್.ಎಸ್.ರಾಜು, ‘ಸಂಸ್ಥೆಯಿಂದ ಪ್ರತಿ ವರ್ಷ ರಕ್ತದಾನ ಶಿಬಿರ ನಡೆಸಲಾಗುತ್ತಿದೆ. ಇದು ಹೀಗೆ ಮುಂದುವರಿಯಲಿದೆ. ವಿದ್ಯಾರ್ಥಿಗಳು ತುರ್ತು ಸಮಯದಲ್ಲಿ ಅಗತ್ಯ ಇರುವವರಿಗೆ ರಕ್ತ ನೀಡಿ ನೆರವಾಗುತ್ತಿದ್ದಾರೆ’ ಎಂದರು.

ವಿದ್ಯೋದಯ ಕಾಲೇಜು ಸಿಇಒ ಪ್ರೊ.ಕೆ.ಚಂದ್ರಣ್ಣ, ಪ್ರಾಂಶುಪಾಲರಾದ ಶಮಾ ಸೈಯದಿ, ರೆಡ್ಕ್ರಾಸ್ ಸಂಚಾಲಕಿ ಕೆ.ಎಸ್.ಪುಷ್ಪಾ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ವಿ.ಕಿಶೋರ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-1566190065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.