ತುಮಕೂರು: ಮಹಿಳೆಯರು ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಜಯಸೇನೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್.ದೀಪಕ್ ಹೇಳಿದರು.

ನಗರದಲ್ಲಿ ಭಾನುವಾರ ವಿಜಯಸೇನೆ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಗೌರವವಿದೆ. ವಿಶೇಷ ಆಚಾರ–ವಿಚಾರ ಹೊಂದಿರುವ ಭಾರತೀಯ ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸಬೇಕು. ಬೆಳವಾಡಿ ಮಲ್ಲಮ್ಮ ಮಹಿಳಾ ಸೈನಿಕರ ಪಡೆ ಕಟ್ಟಿ, ಮರಾಠರ ವಿರುದ್ಧ ಹೋರಾಡಿದ್ದರು. ಅವರ ಶೌರ್ಯದ ಪ್ರತೀಕವಾಗಿ 5 ವರ್ಷದಿಂದ ಮಹಿಳೆಯರನ್ನು ಗೌರವಿಸಲಾಗುತ್ತಿದೆ ಎಂದರು.

ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಟಿ.ಎಸ್.ಸಿದ್ಧಗಂಗಾ ರುದ್ರೇಶ್, ‘ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಛಾಪು ಮೂಡಿಸಿ ಯಶಸ್ವಿಯಾಗುತ್ತಿದ್ದಾರೆ. ಗುರಿ ಇಟ್ಟುಕೊಂಡು, ಸಾಧಿಸುವ ಛಲ ಬೆಳೆಸಿಕೊಂಡು ಮುನ್ನುಗ್ಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ’ ಎಂದು ತಿಳಿಸಿದರು.

ವಿಜಯಸೇನೆ ಮಹಿಳಾ ಘಟಕ ರಾಜ್ಯ ಅಧ್ಯಕ್ಷೆ ಗಂಗರಾಜಮ್ಮ, ‘ವಿವಿಧ ಕಾರ್ಯಕ್ರಮಗಳ ಮೂಲಕ ವಿಜಯಸೇನೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದೆ. ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಮಹಿಳೆಯರು ತಮ್ಮ ಶಕ್ತಿ ಅರಿತು, ಅದಕ್ಕೆ ತಕ್ಕಂತೆ ಸಾಧನೆ ಮಾಡಿ ಯಶಸ್ಸು ಕಾಣಬೇಕು’ ಎಂದು ಸಲಹೆ ಮಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ 50 ಮಂದಿ ಮಹಿಳೆಯರಿಗೆ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಪ್ರಾಂಶುಪಾಲರಾದ ಪ್ರೊ.ಟಿ.ಆರ್.ಲೀಲಾವತಿ, ವಿಜಯಸೇನೆ ಮಹಿಳಾ ಘಟಕ ಜಿಲ್ಲಾ ಅಧ್ಯಕ್ಷೆ ಯಾಸ್ಮೀನ್ ತಾಜ್, ಮೈತ್ರಿ ಸಂಘದ ಅಧ್ಯಕ್ಷೆ ಗಂಗಾ ಪರಮೇಶ್, ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್, ವಿಜಯಸೇನೆ ಜಿಲ್ಲಾ ಅಧ್ಯಕ್ಷ ಗಂಗಾಧರ್, ಪದಾಧಿಕಾರಿಗಳಾದ ರಾಧಾ ಗಂಗಾಧರ್, ಪ್ರಿಯದರ್ಶಿನಿ, ವತ್ಸಲಾ, ಲತಾ, ಮೀನಾ, ಕಾವ್ಯ, ರಂಜನ್, ಹರೀಶ್ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1525303250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.