ಉಡುಪಿ: ಆಟಿಸಂ ಸೊಸೈಟಿ ಆಫ್ ಉಡುಪಿ ವತಿಯಿಂದ ಜಿಲ್ಲಾ ಮಟ್ಟದ ವಿಶೇಷ ಶಾಲಾ ಸಾಂಸ್ಕೃತಿಕ ವೈಭವ ಕಲಾ ಸೌರಭ ಕಾರ್ಯಕ್ರಮ ಏ. 4ರಂದು ಬೆಳಿಗ್ಗೆ 9ರಿಂದ 4.30ರವರೆಗೆ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ನಡೆಯಲಿದೆ ಎಂದು ಡಾ. ಎ.ವಿ. ಬಾಳಿಗ ಮೆಮೋರಿಯಲ್ ಆಸ್ಪತ್ರೆ ನಿರ್ದೇಶಕ ಡಾ. ಪಿ.ವಿ. ಭಂಡಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಣಿಪಾಲದ ಟಿಎಂಜಿ ಸುನಿಧಿ ಫೌಂಡೇಷನ್ ಟ್ರಸ್ಟ್, ಮಣಿಪಾಲ ಪೇಮೆಂಟ್ ಆ್ಯಂಡ್ ಐಡೆಂಟಿಟಿ ಸೊಲ್ಯೂಷನ್ಸ್, ಕಮಲ್ ಎ. ಬಾಳಿಗ ಚಾರಿಟಬಲ್ ಟ್ರಸ್ಟ್ ಮುಂಬೈ, ಬೆಂಗಳೂರಿನ ಒನ್ ಗುಡ್ ಸ್ಟೆಪ್, ಈಶಾನ್ಯ ಇಂಡಿಯಾ ಫೌಂಡೇಷನ್ ಮತ್ತು ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಸಹಕಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಮೈಸೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸವಿತಾ ಸುಲುಗೋಡು ಪಾಲ್ಗೊಳ್ಳುವರು. ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರತ್ನ ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿರೂಪಾಕ್ಷ ದೇವರಮನೆ, ಸೌಮ್ಯ ಶೆಟ್ಟಿ, ಕೀರ್ತೇಶ್, ವಿಠಲ ಭಕ್ತ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-28-25201374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.