ಉಡುಪಿ: ಗುರು ಶಿಷ್ಯ ಸಂಬಂಧ ಕೃಷ್ಣಾರ್ಜುನರಂತೆ ಇರಬೇಕು. ಕೃಷ್ಣ ಮತ್ತು ಅರ್ಜುನರು ಸಮಯದ ಅಗತ್ಯಕ್ಕೆ ತಕ್ಕಂತೆ ಸ್ನೇಹಿತ, ಸಹೋದರ ಹಾಗೆಯೇ ಗುರುಗಳಾಗುತ್ತಿದ್ದರು ಎಂದು ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ನ ಆಡಳಿತಾಧಿಕಾರಿ ಕೆ.ಶ್ರೀಧರ ಆರ್. ಪೈ ಹೇಳಿದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ವನಿತಾ ಮಯ್ಯ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಲೇಜಿನ 21ನೇ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ವನಿತಾ ಮಯ್ಯರಿಗೆ ಸನ್ಮಾನ ಹಾಗೂ ಗೌರವಾರ್ಪಣೆ ಮಾಡಲಾಯಿತು. ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ.ಸತೀಶ್ ಯು.ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದರು.

ವನಿತಾ ಮಯ್ಯರ ಪತಿ ಗಣೇಶ್ ಮಯ್ಯ, ನಿಯೋಜಿತ ಪ್ರಾಂಶುಪಾಲೆ ಗಾಯತ್ರಿ ಪೈ, ಎಂಜಿಎಂ ಪ.ಪೂ.ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ದೇವಿದಾಸ ಎಸ್.ನಾಯ್ಕ, ಶೈಲಜಾ ಎಚ್., ವೀರಾ ಐಡಾ ಪಿಂಟೋ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ.ಪೂ.ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲ ಎಂ ವಿಶ್ವನಾಥ ಪೈ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಎಂ.ಚೆನ್ನ ಪೂಜಾರಿ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-28-473462185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.