ಉಡುಪಿ: ವಿದ್ಯಾರ್ಥಿಗಳು ಶಿಕ್ಷಣ, ಕಲೆ, ಕ್ರೀಡೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು. ಕೃತಕ ಬುದ್ಧಿಮತ್ತೆಯಂತಹ ಆಧುನಿಕ ಅವಕಾಶಗಳಿಗೆ ಸಿದ್ಧರಾಗಬೇಕು ಎಂದು ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.

ನಗರದ ಪೂರ್ಣಪ್ರಜ್ಞಾ (ಸ್ವಾಯತ್ತ) ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು ಸಮಯಪ್ರಜ್ಞೆ, ಶಿಸ್ತು, ರಾಷ್ಟ್ರಪ್ರೇಮ ಮತ್ತು ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ ಎಂಬ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಉಡುಪಿ ಶ್ರೀ ಆದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಈಶಪ್ರಿಯತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಕಾಲೇಜಿನ ವೆಬ್ಸೈಟ್ ಉದ್ಘಾಟಿಸಲಾಯಿತು. ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್ ಸ್ವಾಗತಿಸಿದರು. ಪ್ರಾಂಶುಪಾಲ ರಾಮು ಎಲ್. ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ಖಜಾಂಚಿ ಸಿ.ಎ. ಪ್ರಶಾಂತ್ ಹೊಳ್ಳ ಮಾತನಾಡಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ರಮೇಶ್ ಟಿ.ಎಸ್ ವಂದಿಸಿದರು. ನೇಹಾ ಕಾರ್ಯಕ್ರಮವನ್ನು ನಿರೂಪಿಸಿದರು.

ಐಕ್ಯುಎಸಿ ಸಂಯೋಜಕ ವಿನಯ್ ಕುಮಾರ್ ಡಿ, ವಿಧ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಆನಂದ ರಾಯಮನೆ, ಮಂಜುನಾಥ ಕರಬ, ಸುಮಲತಾ ಪಿ.ಜೆ, ಪ್ರತಿಭಾ ಸಿ. ಆಚಾರ್ಯ, ಕೆ.ಪಿ ನೇಹಾ, ಶರಲ್ ಕಾರ್ನೆಲಿಯೊ, ದೀಪಾ ಬಿ, ವಂದನಾ ಆರ್. ಹೆಗಡೆ, ಪ್ರೀತಿ ಶೆಟ್ಟಿ, ಸಫಾ ಆಮಿನಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-1956952530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.