ಉಡುಪಿ: ‘ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮತ್ತು ಸಾಂವಿಧಾನಿಕ ಮೌಲ್ಯಗಳ ವೃದ್ಧಿಗೆ ಪೂರಕವಾಗಿರಬೇಕು. ಅಲ್ಲಿ ಯಾವುದೇ ವಿಷಯದಲ್ಲೂ ವಿದ್ಯಾರ್ಥಿಗಳ ನಡುವೆ ತಾರತಮ್ಯ ಹಾಗೂ ಗೊಂದಲ ಉಂಟಾಗುವಂತಹ ವಿಷಯಗಳಿಗೆ ಆಸ್ಪದ ನೀಡಬಾರದು. ಸಮಾನತೆಯ ದೃಷ್ಟಿಯಿಂದ ಖಾಸಗಿ, ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ತರಗತಿ ಕೊಠಡಿ ಒಳಗೆ ಏಕ ರೀತಿಯಲ್ಲಿ ಕಾಣುವ ಹಾಗೆ ಸಮವಸ್ತ್ರ ಸಂಹಿತೆಯನ್ನು ಮೀರಬಾರದು’ ಎಂದು ಮುಖಂಡ ಕೆ. ರಘುಪತಿ ಭಟ್ ಹೇಳಿದ್ದಾರೆ.

‘ಹಿಜಾಬ್ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಶಾಲಾ ಶಿಕ್ಷಣ ಇಲಾಖೆ ಹಿಂಪಡೆದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮಸ್ತ್ರದ ಜತೆಗೆ ಹಿಜಾಬ್ ಸೇರಿದಂತೆ ಸೀಮಿತವಾದ ಸಾಂಪ್ರದಾಯಿಕ ಆಧಾರಿತ ಸಂಕೇತಗಳನ್ನು ಧರಿಸಲು ಅವಕಾಶ ನೀಡಿ ಆದೇಶ ಹೊರಡಿಸಿರುವುದನ್ನು ಮರು ಪರಿಶೀಲಿಸಬೇಕು’ ಎಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

‘ಈ ಹಿಂದೆ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಕಾಲೇಜಿನ ನಿಯಮದಂತೆ ಸಮವಸ್ತ್ರ ಸಂಹಿತೆ ಪಾಲಿಸಿ ಕಲಿಯುತ್ತಿದ್ದರು. ಆದರೆ ಒಂದೂವರೆ ವರ್ಷದ ಬಳಿಕ ದುರುದ್ದೇಶ ಪೂರ್ವಕವಾಗಿ ತರಗತಿ ಕೊಠಡಿ ಒಳಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಆಗ್ರಹಿಸಿ ವಿವಾದ ಸೃಷ್ಟಿಸಿದರು. ಇದರಿಂದಾಗಿ ರಾಜ್ಯ ಹಾಗೂ ದೇಶದಾದ್ಯಂತ ಗೊಂದಲ ನಿರ್ಮಾಣವಾಗಿ ಶಿಕ್ಷಣ ವ್ಯವಸ್ಥೆಗೆ ಹಾಗೂ ಕಾನೂನು ವ್ಯವಸ್ಥೆಗೆ ಧಕ್ಕೆ ಉಂಟಾಗಿತ್ತು’ ಎಂದಿದ್ದಾರೆ.

‘ಕೆಲವು ಮತೀಯವಾದಿ ಸಂಘಟನೆಗಳು ಸೇರಿಕೊಂಡು ಹಿಜಾಬ್ ವಿವಾದದ ಮೂಲಕ ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿದ್ದರು. ತರಗತಿ ಕೊಠಡಿಗಳಲ್ಲಿ ಸಮವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಅಂದು ನಾನೂ ಒತ್ತಾಯಿಸಿದ್ದೆ. ಇಂದೂ ನನ್ನ ಆ ಒತ್ತಾಯಕ್ಕೆ ಬದ್ಧನಾಗಿದ್ದೇನೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-1604088945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.