ಉಡುಪಿ: ‘ಪದವಿ ಕೋರ್ಸ್ನ ಎರಡು ಸೆಮಿಸ್ಟರ್ಗಳು ಮುಗಿದರೂ ಮಹಿಳೆಯರ ಸರ್ಕಾರಿ ವಸತಿನಿಲಯಕ್ಕೆ ಪ್ರವೇಶಾತಿ ಸಿಕ್ಕಿಲ್ಲ. ಪಿ.ಜಿ.ಯಲ್ಲಿ ಉಳಿದುಕೊಳ್ಳಲು ಹಣಕಾಸಿನ ತೊಂದರೆ ಇದೆ. ಮನೆಯಲ್ಲಿ ಹೇಳಿದರೆ ಕಾಲೇಜು ಶಿಕ್ಷಣ ಮೊಟಕುಗೊಳಿಸಿ ಬಾ ಅನ್ನುತ್ತಿದ್ದಾರೆ’...

‘ಮಹಿಳೆಯರ ಸರ್ಕಾರಿ ವಸತಿನಿಲಯಕ್ಕೆ ಅರ್ಜಿ ಸಲ್ಲಿಸಬೇಕೆನ್ನುವಾಗ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅವಧಿ ಮುಗಿದಿತ್ತು ಅನಿವಾರ್ಯವಾಗಿ ಸಹಪಾಠಿಗಳಿಂದ ಸಾಲ ಪಡೆದು ರೂಮ್ನಲ್ಲಿ ವಾಸವಾಗಿದ್ದೇನೆ. ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಹಾಸ್ಟೆಲ್ಗೆ ಸೇರುವಂತಹ ವ್ಯವಸ್ಥೆ ಮಾಡಿ’...

‘ಉಡುಪಿ ನಗರ ವ್ಯಾಪ್ತಿಯಲ್ಲಿರುವ ಮಹಿಳೆಯರ ಸರ್ಕಾರಿ ವಸತಿನಿಲಯದಲ್ಲಿ ಆಹಾರದ ಗುಣಮಟ್ಟ ಸರಿ ಇಲ್ಲ’... ನಗರದ ಅಜ್ಜರಕಾಡಿನ ಪುರಭವನದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅಜ್ಜರಕಾಡಿನ ಡಾ.ಜಿ. ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಹೀಗೆ ತಮ್ಮ ಬವಣೆ ತೋಡಿಕೊಂಡರು.

ಅದಕ್ಕೆ ಪ್ರತಿಕ್ರಿಯಿಸಿದ ನಾಗಲಕ್ಷ್ಮಿ ಚೌಧರಿ ಅವರು, ವಸತಿನಿಲಯದ ಸಮಸ್ಯೆಗಳ ಪರಿಹಾರದ ಕುರಿತು ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಲಾಗುವುದು. ವಿದ್ಯಾರ್ಥಿನಿಯರನ್ನು ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಹಾಸ್ಟೆಲ್ಗೆ ಸೇರಿಸಿಕೊಳ್ಳುವ ವಿಚಾರವಾಗಿ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣವು ಜೀವನವನ್ನು ಬದಲಿಸುವ ಅಸ್ತ್ರ. ಅದು ನಾಯಕತ್ವದ ಚಿಂತನೆಯನ್ನು ಬೆಳೆಸುತ್ತದೆ. ಸಾಧಿಸುವ ಛಲ ಮುಖ್ಯವಾಗಿರಬೇಕು ಎಂದು ಹೇಳಿದರು.

ವಿದ್ಯಾರ್ಥಿನಿಯರು ಭಯವಿಲ್ಲದೆ ಪ್ರಶ್ನೆ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಮತ್ತೆ ಮತ್ತೆ ಶೋಷಣೆಗೆ ಒಳಗಾಗಬೇಡಿ, ಧ್ವನಿ ಎತ್ತಿ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಸೋಜನ್ ಕೆ.ಜಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅನುರಾಧ ಹಾದಿಮನಿ, ಉಪನ್ಯಾಸಕಿ ನಿಕೇತನಾ, ಉಪನ್ಯಾಸಕ ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-28-1728703741

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.