ಉಡುಪಿ: ‘ಕನ್ನಡ ಶಾಲೆಗಳನ್ನು ಗಟ್ಟಿಯಾಗಿ ಕಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತು ಹೋಗಿದೆ’ ಎಂದು ಮೂಡುಬಿದಿರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು.

ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಭಾನುವಾರ ನಡೆದ ಉಡುಪಿ ತಾಲ್ಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಭೀಷ್ಮೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದು ಸಮರ್ಪಕವಾಗಿ ಶಿಕ್ಷಕರಿಲ್ಲದೆ ಕನ್ನಡ ಮಾಧ್ಯಮ ಶಾಲೆಗಳು ಸೊರಗುತ್ತಿವೆ. ನಮ್ಮ ರಾಜ್ಯದಲ್ಲಿ ಕಾಲ ಕಾಲಕ್ಕೆ ಬಂದ ಸರ್ಕಾರಗಳು ಕೂಡ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸಂಪೂರ್ಣ ಸೋತಿವೆ. ಆದರೆ ನಾವು ಸರ್ಕಾರವನ್ನು ನಂಬಿ ಕೂರುವುದಲ್ಲ. ಎಲ್ಲರೂ ವೈಯಕ್ತಿಕವಾಗಿ, ಸಂಘ ಸಂಸ್ಥೆ ಗಳ ನೆಲೆಯಲ್ಲಿ ಕನ್ನಡ ಭಾಷೆ ಕಟ್ಟುವುದರ ಜತೆಗೆ ಸರ್ಕಾರಿ ಶಾಲೆಗಳ ಉನ್ನತಿಗೂ ಶ್ರಮಿಸೋಣ’ ಎಂದು ಹೇಳಿದರು.

‘ಉದ್ಯಮಿಗಳು ತಮ್ಮ ಕೋಟಿ, ಕೋಟಿ ಲಾಭಾಂಶದಲ್ಲಿ ಒಂದಂಶವನ್ನು ಕನ್ನಡ ಶಾಲೆಗಳ ಏಳಿಗೆಗಾಗಿ ಮೀಸಲಿರಿ ಸಬೇಕು’ ಎಂದು ಸಲಹೆ ನೀಡಿದರು.

ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ.ಎಂ.ಎಲ್.ಸಾಮಗ ಮಾತನಾಡಿ, ಮನುಷ್ಯನಲ್ಲಿ ಮನುಷ್ಯತ್ವವನ್ನು ಸಾಹಿತ್ಯ ಬೆಳೆಸದಿದ್ದರೆ ಆ ಸಾಹಿತ್ಯದಿಂದ ಏನು ಪ್ರಯೋಜನ. ನಮ್ಮೊಳಗಿನ ಭಿನ್ನಾಭಿ ಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಿಕೊಳ್ಳುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದರು.

ಯಕ್ಷಗಾನ ಕಲಾವಿದ ಡಾ.ಭಾಸ್ಕರಾ ನಂದ ಕುಮಾರ್ ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆ ಮಾಡಿದರು.

ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ತಿಲಕನಾಥ್ ಮಂಜೇಶ್ವರ, ಗೋಪಾಲ್ ಭಟ್ ಎಂ., ವಿಮಲಾ ಚಂದ್ರಶೇಖರ್, ಮರವಂತೆ ನಾಗರಾಜ್ ಹೆಬ್ಬಾರ್, ಲಕ್ಷ್ಮಿ ಹರಿಶ್ಚಂದ್ರ, ವಿಘ್ನೇಶ್ವರ ಅಡಿಗ, ಪಿ.ಎಂ.ವೇಣುಗೋಪಾಲ್ ಹೆಬ್ಬಾರ್, ವಿಶ್ವೇಶ್ವರ ಅಡಿಗ, ವಿದ್ಯಾ ಲತಾ ಯು.ಶೆಟ್ಟಿ ಅವರಿಗೆ ಕಸಾಪ ಉಡುಪಿ ತಾಲ್ಲೂಕು ಗೌರವ ಪುರಸ್ಕಾರ ನೀಡಲಾಯಿತು.

ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಕರ್ಣಾಟಕ ಬ್ಯಾಂಕ್ನ ರಮೇಶ್ ವೈದ್ಯ, ಕಸಾಪ ಉಡುಪಿ ತಾಲ್ಲೂಕು ಗೌರವ ಸಲಹೆಗಾರ ಭುವನ ಪ್ರಸಾದ್ ಹೆಗ್ಡೆ ಮಾತನಾಡಿದರು.

ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕಸಾಪ ಉಡುಪಿ ತಾಲ್ಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಗೌರವ ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ.ಆಶಯ ನುಡಿಗಳನ್ನಾಡಿದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು ಸ್ವಾಗತಿಸಿದರು. ಕಸಾಪ ಉಡುಪಿ ತಾಲ್ಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡ ವೂರು ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಸನ್ಮಾನಿತರನ್ನು ಪರಿಚಯಿ ಸಿದರು. ಪೂರ್ಣಿಮಾ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು.

ಸಮ್ಮೇಳನಕ್ಕೂ ಮುನ್ನ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದಿಂದ ಮೆರವಣಿಗೆ ನಡೆಯಿತು. ನಂತರ ಧ್ವಜಾರೋಹಣ, ಸಾಹಿತಿ ರಾಮದಾಸ್ ನೆನಪಿನ ಪುಸ್ತಕ ಮಳಿಗೆ, ಗಮಕ ಸೌರಭ, ಚಿತ್ರ ಕಲಾವಿದರಾದ ಆಸ್ಟ್ರೋ ಮೋಹನ್ ಹಾಗೂ ಜನಾರ್ದನ ಕೊಡವೂರು ಸಂಪಾದಿತ ‘ಚಿತ್ರ ಮಯ ಉಡುಪಿ’ ಮತ್ತು ನಿತ್ಯಾನಂದ ನಾಯಕ್ ಅವರ ಕಲಾಕೃತಿಗಳ ಪ್ರದರ್ಶನವನ್ನು ಉದ್ಘಾಟಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-28-113591692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.