ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯ 8ನೇ ಕುಲಪತಿಯಾಗಿ ಡಾ.ಶರತ್ ಕೆ. ರಾವ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಮೂಳೆತಜ್ಞ, ಶೈಕ್ಷಣಿಕ ಆಡಳಿತಗಾರರಾಗಿರುವ ಶರತ್ ರಾವ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ 4 ದಶಕಗಳ ಅನುಭವ ಹೊಂದಿದ್ದಾರೆ. ಮಾರ್ಚ್ ತಿಂಗಳಲ್ಲೇ ಅವರ ನೇಮಕಾತಿ ಘೋಷಿಸಲಾಗಿತ್ತು. ಮಾಹೆಯ ಶೈಕ್ಷಣಿಕ ಗುಣಮಟ್ಟವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವರ ನಾಯಕತ್ವ ಮಹತ್ವದ್ದಾಗಿದೆ ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

ವೈದ್ಯಕೀಯ ಕ್ಷೇತ್ರಕ್ಕೆ ಡಾ.ರಾವ್ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಲಂಡನ್ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಸಂಸ್ಥೆಯು 2025ರ ಜುಲೈ 8ರಂದು ಅವರಿಗೆ ಗೌರವ ಫೆಲೋಶಿಪ್ (ಎಫ್ಆರ್ಸಿಪಿ) ನೀಡಿ ಗೌರವಿಸಿತ್ತು.

ಮೈಸೂರು ವಿಶ್ವವಿದ್ಯಾಲಯದಿಂದ ಎಂಬಿಬಿಎಸ್, ಮಂಗಳೂರು ವಿಶ್ವವಿದ್ಯಾಲಯದಿಂದ ಡಿ.ಆರ್ಥೊ, ಎಂ.ಎಸ್. ಪದವಿಗಳನ್ನು ಪಡೆದ ಅವರು, 1988ರಲ್ಲಿ ಕೆಎಂಸಿ ಮಣಿಪಾಲದಲ್ಲಿ ಸಹಾಯಕ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದರು. ಕೆಎಂಸಿ ಮಣಿಪಾಲದ ಮೂಳೆಚಿಕಿತ್ಸೆ ವಿಭಾಗ ಮುಖ್ಯಸ್ಥರಾಗಿ, ಅಸೋಸಿಯೇಟ್ ಡೀನ್, ಡೀನ್ ಆಗಿ ಕಾರ್ಯನಿರ್ವಹಿಸಿದ್ದಾರೆ. 2023ರಿಂದ 2026 ರವರೆಗೆ ಮಾಹೆಯ ಸಹ ಕುಲಪತಿ (ಆರೋಗ್ಯ ವಿಜ್ಞಾನ) ಜವಾಬ್ದಾರಿ ನಿಭಾಯಿಸಿದ್ದಾರೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಡಾ.ಕೆ. ಶರತ್ ರಾವ್ , ‘ವೈಯಕ್ತಿಕ ಮತ್ತು ವೃತ್ತಿಜೀವನದ ಅವಿಭಾಜ್ಯ ಅಂಗವಾಗಿರುವ ಮಾಹೆಯನ್ನು ಮುನ್ನಡೆಸುವ ಜವಾಬ್ದಾರಿ ದೊರೆತಿರುವುದು ಹೆಮ್ಮೆಯ ವಿಷಯ. ಹಿಂದಿನವರು ಹಾಕಿರುವ ಬಲಿಷ್ಠ ಬುನಾದಿಯ ಮೇಲೆ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಗುರಿ ಇದೆ. ಎಲ್ಲರ ಸಹಕಾರದೊಂದಿಗೆ ಶಿಕ್ಷಣ, ಸಂಶೋಧನೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಮಾಹೆಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಬದ್ಧನಾಗಿದ್ದೇನೆ. ಸಾಮಾಜಿಕ ಕಳಕಳಿ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದೇ ನನ್ನ ಮುಖ್ಯ ಉದ್ದೇಶ' ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-28-1737594391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.