ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಗಸಂಸ್ಥೆಗಳಾದ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಮಣಿಪಾಲ್ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ನಡೆಯಿತು.

ಕೊಯಮತ್ತೂರಿನ ರಾಯಲ್ ಕೇರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನರ್ಸಿಂಗ್ ಡೈರೆಕ್ಟರ್ ಡಾ. ಶ್ಯಾಮಲಾ ಕುಮಾರ್ ಮಾತನಾಡಿ, ‘ಆಧುನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯಲ್ಲಿ ದಾದಿಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ದಾದಿಯ ಉಪಸ್ಥಿತಿಯೇ ರೋಗಿಗೆ ಪರಮ ಔಷಧಿಯಿದ್ದಂತೆ. ಈ ವೃತ್ತಿಯು ಜೀವನಾಧಾರಕ್ಕೆ ಮಾತ್ರ ಸೀಮಿತವಾಗಿಲ್ಲ, ಸಹಾನುಭೂತಿ, ನಾಯಕತ್ವ ಮತ್ತು ರೋಗಿ ಕೇಂದ್ರಿತ ಕಾಳಜಿಯನ್ನೊಳಗೊಂಡ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಸಂಚಾಲಕಿ ಜ್ಯಾನೆಟ್ ಪ್ರಮೀಳಾ ಡಿಸೋಜ ವರದಿ ಮಂಡಿಸಿದರು. ಕಾರ್ಯಕ್ರಮದ ಅಂಗವಾಗಿ ವಿಚಾರಸಂಕಿರಣ, ಟ್ರಾಮಾ ಮ್ಯಾನೇಜ್ಮೆಂಟ್ ಕುರಿತು ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ಆಶುಭಾಷಣ, ಕೊಲಾಜ್ ಮೇಕಿಂಗ್, ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಮಣಿಪಾಲ ಕಸ್ತೂರಬಾ ಆಸ್ಪತ್ರೆಯ ವಾರ್ಡ್ ಸಿಸ್ಟರ್ ಸುಜಾತಾ ಬಿ. ಮತ್ತು ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಲಕ್ಷ್ಮಿ ಬಿ. ಅವರನ್ನು ಸನ್ಮಾನಿಸಲಾಯಿತು.

ಮಣಿಪಾಲ್ ಸ್ಕೂಲ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಡಾ. ಲೀನಾ ಸಿಕ್ವೇರಾ ಮಾತನಾಡಿದರು. ಮಣಿಪಾಲ್ ಸ್ಕೂಲ್ ಆಫ್ ನರ್ಸಿಂಗ್ನ ಮಾಜಿ ಪ್ರಾಂಶುಪಾಲೆ ಡಾ. ಕಸ್ತೂರಿ ಆರ್. ಅಡಿಗ ಅವರು ಸ್ಥಾಪಿಸಿದ ಪ್ರಶಸ್ತಿಯನ್ನು ತುರ್ತು ಚಿಕಿತ್ಸಾ ವಿಭಾಗದ ಸ್ಟಾಫ್ ನರ್ಸ್ ಶಿವ ಪ್ರಸಾದ್ ಅವರಿಗೆ ಪ್ರದಾನ ಮಾಡಲಾಯಿತು.

ಅಕಾಡೆಮಿಕ್ ಮತ್ತು ಕ್ಲಿನಿಕಲ್ ಸಾಧನೆಗಾಗಿ ವಿದ್ಯಾರ್ಥಿಗಳಾದ ಅಭಿಷೇಕ್ ಕುಮಾರ್, ಕುಮಾರಿ ಸಾನಿಯಾ ದಾಸ್ ಅವರನ್ನು ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-1313824151

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.