ಉಡುಪಿ: ನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ ಕಾರ್ಯಕ್ರಮ ಈಚೆಗೆ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.

ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಎಂ. ವಿಶ್ವನಾಥ್ ಪೈ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮಾತನಾಡಿದರು. ಸೂರಜ್ ಅತಿಥಿಗಳನ್ನು ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ನೃತ್ಯ ನಿರ್ದೇಶಕ ಎಲ್ಟನ್ ಜೆಫ್ ಮತ್ತು ನಟಿ ಅನ್ವಿತಾ ಸಾಗರ್ ಪಾಲ್ಗೊಂಡಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ಅಧ್ಯಕ್ಷ ಧೀರಜ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕರೇನ್ ಲಿಸಾ ಅರೋನ್ ಮಂಡಿಸಿದರು.

ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ ಆಚಾರ್ಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಗಾಯತ್ರಿ ಪೈ, ಪೋಷಕರ-ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ನಾಯಕ್, ಕಾರ್ಯದರ್ಶಿ ಭಾರತಿ ಜಯಕರ್, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್. ನಾಯಕ್, ಮಲ್ಲಿಕಾ ಎ. ಶೆಟ್ಟಿ ಉಪಸ್ಥಿತರಿದ್ದರು.

ಶ್ರೀಧರ್ ಆರ್. ಪೈ ಅಧ್ಯಕ್ಷತೆ ವಹಿಸಿದ್ದರು. ಅನನ್ಯಾ ಜಿ. ಹೆಗ್ಡೆ ವಂದಿಸಿದರು. ಮಧುರಾ ಹೆಬ್ಬಾರ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-1909044563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.