ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹಗರಣಕ್ಕೆ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯೇ ನೇರ ಹೊಣೆಯಾಗಿದ್ದು, ಕೇಂದ್ರ ಮಾನವ ಸಂಪನ್ಮೂಲ ಸಚಿವರು ರಾಜೀನಾಮೆ ನೀಡಬೇಕು ಎಂದು ಚಿಂತಕ ಪ್ರೊ.ಫಣಿರಾಜ್ ಆಗ್ರಹಿಸಿದರು.

ಉಡುಪಿ ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಎಸ್.ಐ.ಒ ಮತ್ತು ಜಿ.ಐ.ಒ ಜಿಲ್ಲಾ ಘಟಕಗಳು ಜಂಟಿಯಾಗಿ ಸೋಮವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನೀಟ್ ವ್ಯವಸ್ಥೆಯ ಮೂಲಕ ಭಾರತದಲ್ಲಿ ವೈದ್ಯಕೀಯ ಶಿಕ್ಷಣವನ್ನು ವ್ಯಾಪಾರವನ್ನಾಗಿ ಮಾಡಿ, ನೈತಿಕ ಮತ್ತು ಸಾಮಾಜಿಕ ಬದ್ಧತೆಯನ್ನು ನಾಶ ಮಾಡಲಾಗುತ್ತಿದೆ ಎಂದರು.

ನೀಟ್ ಪರೀಕ್ಷಾ ವ್ಯವಸ್ಥೆಯು ಸರ್ವಾಧಿಕಾರಿ ವ್ಯವಸ್ಥೆಯ ಭಾಗ. ಅದನ್ನು ದಕ್ಷಿಣದ ರಾಜ್ಯಗಳು ವಿರೋಧಿಸುತ್ತ ಬಂದಿವೆ. ಉತ್ತರ ರಾಜ್ಯಗಳ ಕೋಚಿಂಗ್ ಮಾಫಿಯಾಗಳಿಗೆ ಮಣಿದು ಈ ನೀಟ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಎಸ್.ಐ.ಒ. ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ನಿಹಾಲ್ ಕಿದಿಯೂರು ಮಾತನಾಡಿ, ಮಾನವೀಯತೆ, ಮೌಲ್ಯಯುತ ಶಿಕ್ಷಣವಿಲ್ಲದೆ ಪ್ರಸ್ತುತ ಶ್ರೈಕ್ಷಣಿಕ ವ್ಯವಸ್ಥೆ ಬರಗೆಟ್ಟು ಹೋಗಿದೆ ಎಂದರು.

ಡಾ. ನಸುಹಾ, ಎಸ್.ಐ.ಒ. ಜಿಲ್ಲಾಧ್ಯಕ್ಷ ಆಯಾನ್ ಮಲ್ಪೆ ಮಾತನಾಡಿದರು. ಸಮೀರ್ ತೀರ್ಥಹಳ್ಳಿ ನಿರೂಪಿಸಿದರು.

ರೆಹಾನ್ ಉಡುಪಿ, ಸಾಕೀಬ್ ಹೂಡೆ, ನಿಫಾಲ್ ಕಿದಿಯೂರು, ಮುಝೈನ್ ಆದಿ ಉಡುಪಿ,ಹಂಝಾ ಹಸನ್ ಹೂಡೆ, ಹುಸೇನ್ ಕೋಡಿಬೆಂಗ್ರೆ, ನಿಸಾರ್ ಉಡುಪಿ, ಝೀಫಾ ನಾಝ್, ಅಸ್ಮಾ ಬಾನು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-28-148838426

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.