ಹೆಬ್ರಿ: ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಮನೆಮನೆಯಿಂದ ಕರೆತರಲು ಆರಂಭಿಸಿರುವ ‘ಶತರಥ’ ಶಾಲಾ ಮಕ್ಕಳ ವಾಹನ ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಲಾಯಿತು.

ಪಡುಕುಡೂರು ಭದ್ರಕಾಳಿ ಅಮ್ಮನವರ ಸನ್ನಿಧಿಯಲ್ಲಿ ಪೂಜೆ ನೆರವೇರಿಸಿ ಈ ವ್ಯವಸ್ಥೆಗೆ ಚಾಲನೆ ನೀಡಲಾಯಿತು.

ಕನ್ನಡ ಉಳಿಸಿ ಎಂಬುದು ಮಾತಿಗೆ ಸೀಮಿತವಾಗಬಾರದು. ನಮ್ಮದು ಗ್ರಾಮೀಣ ಪ್ರದೇಶದ ಶಾಲೆ, ಮಕ್ಕಳ ಪಾಲಕರು ದಿನನಿತ್ಯ ಕೆಲಸಕ್ಕೆ ಹೋಗುತ್ತಾರೆ. ನಾವು ಏನಾದರೂ ವ್ಯವಸ್ಥೆ ಮಾಡಿ ವಾಹನದ ಮೂಲಕ ಮಕ್ಕಳನ್ನು ಕರೆತಂದರೆ ಸರ್ಕಾರಿ ಕನ್ನಡ ಶಾಲೆಗಳು ಉಳಿಯುತ್ತವೆ. ಪಡುಕುಡೂರು ಶಾಲೆಯ ಶತಮಾನೋತ್ಸವ ಸಂಭ್ರಮದ ನೆನಪಿಗಾಗಿ ಸರ್ವರ ಸಹಕಾರದಲ್ಲಿ ಶತರಥ ಶಾಲಾ ವಾಹನ ವ್ಯವಸ್ಥೆಗೆ ಚಾಲನೆ ನೀಡಿದ್ದೇವೆ ಎಂದು ಮುಖ್ಯ ಶಿಕ್ಷಕ ಹರೀಶ ಪೂಜಾರಿ ಎಸ್ ಹೇಳಿದರು.

ಪಡುಕುಡೂರು ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಸೇರಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳಿಗೆ ಖಾಸಗಿ ಶಾಲೆಯಂತೆ ಸಕಲ ವ್ಯವಸ್ಥೆ ನೀಡುತ್ತೇವೆ. ಸ್ಥಳೀಯರು ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಿ. ಪಡುಕುಡೂರಿನ ವಿವಿಧ ಭಾಗಗಳಿಂದ, ಸೂರಿಮಣ್ಣು, ಕೆಳಖಜಾನೆ, ಮಾವಿನಕಟ್ಟೆ, ಚಟ್ಕಲ್ ಪಾದೆ ಸೇರಿ ವಿವಿಧೆಡೆಯಿಂದ ಮಕ್ಕಳನ್ನು ಪಡುಕುಡೂರು ಶಾಲೆಗೆ ಕರೆತರಲಾಗುತ್ತಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಮನವಿ ಮಾಡಿದರು.

ಶಾಲಾ ಪ್ರಾರಂಭೋತ್ಸವ ನಡೆಯಿತು. ಮಕ್ಕಳು, ಅತಿಥಿಗಳು ಹಾಗೂ ಗೌರವ ಶಿಕ್ಷಕಿಯರನ್ನು ಸ್ವಾಗತಿಸಲಾಯಿತು. ಶತರಥ ವಾಹನ ಚಾಲಕ ರಾಘವೇಂದ್ರ ಆಚಾರ್ಯ ಗರ್ಧರಬೆಟ್ಟು ಅವರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಸಂಚಾಲಕ ಪ್ರಸನ್ನ ಶೆಟ್ಟಿ, ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹರೀಶ ಪೂಜಾರಿ, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ, ಶತಮಾನೋತ್ಸವ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-218061539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.