ಉಡುಪಿ: ಬೇಸಿಗೆಯ ರಜೆ ಕಳೆದು ಮರಳಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಜಿಲ್ಲೆಯಾದ್ಯಂತ ಶಿಕ್ಷಕರು ಸೋಮವಾರ ಆತ್ಮೀಯವಾಗಿ ಬರಮಾಡಿಕೊಂಡರು.

ಜಿಲ್ಲೆಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಾಲೆಯ ಆವರಣ ಪ್ರವೇಶಿಸುತ್ತಿದ್ದಂತೆ ಅವರಿಗೆ ಹೂವು, ಪೆನ್, ಪೆನ್ಸಿಲ್ ನೀಡಿ ಸ್ವಾಗತಿಸಲಾಯಿತು. ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನೂ ವಿತರಿಸಲಾಯಿತು.

ತಾಲ್ಲೂಕು ಮಟ್ಟದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು, ಊರಿನ ಗಣ್ಯರು ಪಾಲ್ಗೊಂಡಿದ್ದರು. ಪ್ರಾರಂಭೋತ್ಸವ ಕಾರ್ಯಕ್ರಮದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನೂ ವಿತರಿಸಲಾಯಿತು.

ಕೆಲವು ಶಾಲೆಗಳಲ್ಲಿ ಪ್ರಾರಂಭೋತ್ಸವದ ಬಳಿಕ ಶಿಕ್ಷಕರ ಮತ್ತು ಪೋಷಕರ ಸಭೆ ಆಯೋಜಿಲಾಗಿತ್ತು.

ಶಿಕ್ಷಣವೇ ಅಡಿಪಾಯ: ‘ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸದೃಢ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ’ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮಕ್ಕೆ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

‘ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ದಾನಿಗಳ ಕೊಡುಗೆ ಅಪಾರವಾಗಿದ್ದು, ಮುಂದಿನ ದಿನಗಳಲ್ಲಿಯೂ ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಅಗ್ರ ಸ್ಥಾನವನ್ನು ಅಲಂಕರಿಸಲಿ’ ಎಂದು ಹೇಳಿದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೆಕಾರು, ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆ, ಗಾಂಧಿ ಶತಾಬ್ದಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-1435095258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.