ಉಡುಪಿ: ಸರ್ಕಾರ, ಸಂಘ ಸಂಸ್ಥೆಗಳು ಹಾಗೂ ದಾನಿಗಳ ಸಹಭಾಗಿತ್ವದಲ್ಲಿ ವಿಶೇಷ ಮಕ್ಕಳ ಬದುಕಿನ ಪರಿವರ್ತನೆ ಸಮಾಜಕ್ಕೆ ಹೊಸ ದಿಕ್ಕು ತೋರಬೇಕು ಎಂದು ಶಾಸಕ ಯಶಪಾಲ್ ಎ.ಸುವರ್ಣ ಹೇಳಿದರು.

ಪೋಷಕರ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟ (ಎನ್ಸಿಪಿಒ) ಪರಿವಾರ್, ಮಾಹೆ ವಿ.ವಿ.ಅಧೀನದ ಆಸರೆ ಚಾರಿಟಬಲ್ ಟ್ರಸ್ಟ್, ಹೈದರಾಬಾದಿನ ಮೌಲಾನಾ ಆಝಾದ್ ನ್ಯಾಷನಲ್ ಉರ್ದು ವಿವಿ ವತಿಯಿಂದ ಕುಂಜಿಬೆಟ್ಟು ಶಾರದಾ ವಸತಿ ಶಾಲೆಯಲ್ಲಿ ಶನಿವಾರ ನಡೆದ 97ನೇ ಪ್ರಾದೇಶಿಕ ಪೋಷಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಹ್ಮಗಿರಿಯಲ್ಲಿ ವಿಶೇಷ ಮಕ್ಕಳಿಗಾಗಿ ರಾಜ್ಯ ಸರ್ಕಾರ, ನಗರಸಭೆ ಹಾಗೂ ಸಿಎಸ್ಆರ್ ನೆರವಿನಿಂದ ₹4 ಕೋಟಿ ವೆಚ್ಚದಲ್ಲಿ ಸಮರ್ಥ ಪಾರ್ಕ್ ನಿರ್ಮಿಸಲಾಗುತ್ತಿದೆ ಎಂದರು.

ಉದ್ಯಮಿ ಪುರುಷೋತ್ತಮ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪರಿವಾರ್ ರಾಷ್ಟ್ರೀಯ ಪ್ರಧಾನ ಕಾರ್ಯದಶಿ ಡಾ.ಸುದೀಪ್ ಗೋಯಲ್, ಜಿ.ಪಂ.ಮುಖ್ಯ ಯೋಜನಾಧಿಕಾರಿ ಡಾ.ಉದಯ್ ಶೆಟ್ಟಿ, ಮಾಹೆ ಎಂಸಿಎಚ್ಪಿ ಡೀನ್ ಡಾ.ಅರುಣ್ ಮಯ್ಯ, ಎಸ್ಆರ್ಎಸ್ ನಿರ್ದೇಶಕ ವಿದ್ಯಾವಂತ ಆಚಾರ್ಯ, ಜಿಲ್ಲಾ ದಿವ್ಯಾಂಗರ ಸಬಲೀಕರಣ ಅಧಿಕಾರಿ ರತ್ನಾ, ಬಿ.ಎಂ.ಭಟ್, ಆಸರೆ ಚಾರಿಟಬಲ್ ಟ್ರಸ್ಟಿನ ಟ್ರಸ್ಟಿ ಶ್ರೀಧರ್ ಉಪಸ್ಥಿತರಿದ್ದರು.

ಅರ್ಚನಾ ಪ್ರಾರ್ಥನಾ ನೃತ್ಯ ಮಾಡಿದರು. ಸಮಾವೇಶ ಸಂಘಟನಾ ಸಮಿತಿ ಸದಸ್ಯ ಕೆ.ಎಸ್.ಜೈವಿಠಲ್ ಸ್ವಾಗತಿಸಿದರು. ರಮೇಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಅರ್ಚನಾ ಟ್ರಸ್ಟಿನ ಟ್ರಸ್ಟಿ ಡಾ.ಪದ್ಮರಾಜ್ ಹೆಗ್ಡೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-28-32406344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.