ಉಡುಪಿ: ಉತ್ತಮ ಸಂಸ್ಕಾರ ಹಾಗೂ ಮೌಲ್ಯಾಧಾರಿತ ಆದರ್ಶ ವ್ಯಕ್ತಿತ್ವ ರೂಪಿಸುವ ಏಕೈಕ ವೃತ್ತಿ ಶಿಕ್ಷಕ ವೃತ್ತಿಯಾಗಿದ್ದು, ಮೌಲ್ಯಾಧಾರಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದೆ ಎಂದು ತುಮಕೂರಿನ ರಾಮಕೃಷ್ಣ ಆಶ್ರಮದ ಎಸ್. ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್. ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಬಂದ 41 ಶಾಲಾ ಕಾಲೇಜುಗಳಿಗೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿ ನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದಿನ ಸಮಾಜದಲ್ಲಿ ಶೈಕ್ಷಣಿಕವಾಗಿ ಉತ್ತಮ ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಸಂಕಲ್ಪ ಮಾಡಬೇಕಿದೆ ಎಂದರು.

ಶಿಕ್ಷಣ ಇಲಾಖೆಯ ಪರವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಮಾರುತಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ, ಉಮಾ ಅವರನ್ನು ಅಭಿನಂದಿಸಲಾಯಿತು.

ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಕಲ್ಯಾಣಿ, ಅಶ್ವಿತ ಹಾಗೂ ನಿಶಲ್ ಪೂಜಾರಿ ಹಾಗೂ ಶೇ 100 ರಷ್ಟು ಫಲಿತಾಂಶ ಬಂದ ಶಾಲಾ ಕಾಲೇಜುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.ಮಟ್ಟು ಯತೀಶ್ ಕೋಟ್ಯಾನ್ ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-1709855243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.