ಉಡುಪಿ: ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆಯಡಿ ಜಿಲ್ಲೆಯ 35 ವಿದ್ಯಾರ್ಥಿಗಳಿಗೆ ಬ್ರಹ್ಮಾವರದ ಕ್ರಾಸ್ಲ್ಯಾಂಡ್ ಕಾಲೇಜಿನಲ್ಲಿ ತರಬೇತಿ ಹಮ್ಮಿಕೊಂಡಿದ್ದು, ಪ್ರಶಿಕ್ಷಣಾರ್ಥಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಈಚೆಗೆ ಉಚಿತ ಕಿಟ್ ವಿತರಿಸಿದರು.

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಈ ಯೋಜನೆಯು 18ರಿಂದ 35 ವರ್ಷ ವಯಸ್ಸಿನ ಗ್ರಾಮೀಣ ಬಡ ಯುವಕರಿಗೆ ಉಚಿತ ತರಬೇತಿ ಮತ್ತು ಉದ್ಯೋಗ ಒದಗಿಸುವ ಗುರಿ ಹೊಂದಿದೆ. ತರಬೇತಿದಾರರಿಗೆ 3 ತಿಂಗಳ ಉಚಿತ ತರಬೇತಿ ನೀಡಿ ಮಾಸಿಕವಾಗಿ ₹3,500 ಶಿಷ್ಯವೇತನ ನೀಡಲಾಗುತ್ತಿದ್ದು, ಉದ್ಯೋಗ ದೊರೆತ ನಂತರ ಪ್ರತಿ ತಿಂಗಳು ₹1,200ರಂತೆ ಒಟ್ಟು 6 ತಿಂಗಳ ಅವಧಿಗೆ ₹7,200 ಅನ್ನು ಸಹಾಯಧನವಾಗಿ ಪಾವತಿಸಲಾಗುತ್ತದೆ ಎಂದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ದೇಶದ ಅಭಿವೃದ್ಧಿಗೆ ಕೌಶಲಾಧಾರಿತ ತರಬೇತಿ ಮತ್ತು ಉದ್ಯೋಗ ಅತ್ಯಂತ ಪ್ರಮುಖವಾಗಿದ್ದು, ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರಾಸ್ಲ್ಯಾಂಡ್ ಕಾಲೇಜಿನ ಪ್ರಾಂಶುಪಾಲ ರಾಬರ್ಟ್ ಕ್ಲೈವ್, ತರಬೇತಿಯ ಮುಖ್ಯಸ್ಥ ಗಣೇಶ್ ಪೂಜಾರಿ ಇದ್ದರು. ದೀಪಾ ಅನಂತರಾವ್ ಕಿತ್ತೂರು ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-28-1443786571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.